Publish Date: Sat, 09 Apr 2022 (10:30 IST)
Updated Date: Sat, 09 Apr 2022 (10:43 IST)
ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಹೊಸ ಸಿನಿಮಾ ಘೋಷಣೆಯಾಗಿದೆ. ಇದಕ್ಕೆ ಘೋಸ್ಟ್ ಎಂಬ ಟೈಟಲ್ ಫಿಕ್ಸ್ ಆಗಿದೆ.
ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಶಿವರಾಜ್ ಕುಮಾರ್ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಇದಕ್ಕೆ ಶ್ರೀನಿ ಆಕ್ಷನ್ ಕಟ್ ಹೇಳಲಿದ್ದಾರೆ.
ಈಗಾಗಲೇ ಶಿವಣ್ಣ ವೇದ, ಭೈರಾಗಿ, ನೀ ಸಿಗೊವರೆಗೂ ಎಂಬ ಮೂರು ಸಿನಿಮಾ ಮಾಡುತ್ತಿದ್ದಾರೆ. ಇದರ ಜೊತೆಗೆ ರಿಷಬ್ ಶೆಟ್ಟಿ ಜೊತೆಗೂ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿಯಿತ್ತು. ಇದರೊಂದಿಗೆ ಶಿವಣ್ಣ ಸಿನಿಮಾಗಳಲ್ಲಿ ಬ್ಯುಸಿಯಾಗುತ್ತಿದ್ದಾರೆ.