ಬೆಂಗಳೂರು: ಹ್ಯಾಟ್ರಿಕ್ ಶಿವರಾಜ್ ಕುಮಾರ್ ಜತೆಗೆ ಡಾಲಿ ಧನಂಜಯ್ ಮತ್ತು ದಿಯಾ ಖ್ಯಾತಿಯ ಪೃಥ್ವಿ ಅಂಬರ್ ನಟಿಸುತ್ತಿರುವ ಹೊಸ ಚಿತ್ರದ ಟೈಟಲ್ ಇಂದು ಲಾಂಚ್ ಆಗಲಿದೆ.
ಇಂದು 10.30 ಕ್ಕೆ ಚಿತ್ರದ ಟೈಟಲ್ ಲಾಂಚ್ ಮಾಡಿ ಮುಹೂರ್ತ ನೆರವೇರಿಸಲು ಚಿತ್ರತಂಡ ನಿರ್ಧರಿಸಿದೆ. ನಗರದ ದೊಡ್ಡ ಗಣಪತಿ ದೇವಾಲಯದಲ್ಲಿ ಚಿತ್ರಕ್ಕೆ ಚಾಲನೆ ಸಿಗಲಿದೆ. ಕೃಷ್ಣ ಸಾರ್ಥಕ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ವಿಜಯ್ ಮಿಲ್ಟನ್ ನಿರ್ದೇಶಿಸುತ್ತಿದ್ದಾರೆ.