ಬೆಂಗಳೂರು: ಕಾಂಗ್ರೆಸ್ ಸೇರಿರುವ ಪತ್ನಿ ಗೀತಾ ಜೊತೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ನಟ ಶಿವರಾಜ್ ಕುಮಾರ್ ತಾನು ಯಾವುದೇ ರಾಜಕೀಯ ಪಕ್ಷ ಸೇರಲ್ಲ, ಚುನಾವಣೆಗೂ ಸ್ಪರ್ಧಿಸಲ್ಲ ಎಂದು ಘೋಷಣೆ ಮಾಡಿದ್ದಾರೆ.
ಶಿವಣ್ಣ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತಿದ್ದಂತೇ ಅವರ ಅಭಿಮಾನಿಗಳು ನಿಮಗೆ ರಾಜಕೀಯ ಬೇಡ ಎಂದು ಮನವಿ ಮಾಡಿದ್ದರು.
ಇದರ ಬೆನ್ನಲ್ಲೇ ಈಗ ಶಿವಣ್ಣ ಸ್ಪಷ್ಟನೆ ನೀಡಿದ್ದಾರೆ. ನನ್ನ ಆಪ್ತರಿಗಾಗಿ ಪ್ರಚಾರ ನಡೆಸುತ್ತಿದ್ದೇನಷ್ಟೇ. ನನ್ನ ಪತ್ನಿ ರಾಜಕೀಯದ ಕುಟುಂಬಕ್ಕೆ ಸೇರಿದವರು. ಹೀಗಾಗಿ ಅವರೊಂದಿಗೆ ಪ್ರಚಾರದಲ್ಲಿ ಭಾಗಿಯಾಗಿರುವುದಾಗಿ ಹೇಳಿದ್ದಾರೆ.