ಶಿವಣ್ಣನ ಟಗರು ನೋಡಿ ಏನಂತಾರೆ ಪ್ರೇಕ್ಷಕರು?!

ಶುಕ್ರವಾರ, 23 ಫೆಬ್ರವರಿ 2018 (10:01 IST)
ಬೆಂಗಳೂರು: ಶಿವರಾಜ್ ಕುಮಾರ್ ಮತ್ತು ಸೂರಿ ಕಾಂಬಿನೇಷನ್ ನ ಟಗರು ಚಿತ್ರ ಇಂದು ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ಶಿವಣ್ಣ ಅಭಿಮಾನಿಗಳಿಗೆ ಹಬ್ಬವಾಗಿದೆ.
 

ಈಗಾಗಲೇ ಮೊದಲ ಶೋ ನೋಡಿರುವ ಪ್ರೇಕ್ಷಕರು ತಮ್ಮ ಅಭಿಪ್ರಾಯಗಳನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಶಿವರಾಜ್ ಕುಮಾರ್ ಅಬ್ಬರದ ಡೈಲಾಗ್ ಗಳಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ.

ಚಿತ್ರದ ಮೊದಲಾರ್ಧದದಲ್ಲಿ ಹೊಡೆ ಬಡಿಯ ದೃಶ್ಯದ ಜತೆಗೆ ಶಿವರಾಜ್ ಕುಮಾರ್ ಅಭಿನಯದ ಬಗ್ಗೆ ಟ್ವಿಟರ್ ನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಗೆಯೇ ಇದು ಮಾಮೂಲು ಕತೆಯಾದರೂ ಹೊಸ ರೀತಿಯಲ್ಲಿ ನಿರೂಪಿಸಲಾಗಿದೆ ಎಂದು ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಿವಣ್ಣ ಜತೆಗೆ ಈ ಸಿನಿಮಾದಲ್ಲಿ ಸ್ಕ್ರೀನ್ ಶೇರ್ ಮಾಡಿಕೊಂಡಿರುವ ಧನಂಜಯ್ ಅಭಿನಯಕ್ಕೆ ಪ್ರೇಕ್ಷಕರು ಫುಲ್ ಮಾರ್ಕ್ ಕೊಟ್ಟಿದ್ದಾರೆ. ಇಂದು ಕೆಲವು ಥಿಯೇಟರ್ ಗಳಿಗೆ ಖುದ್ದಾಗಿ ಚಿತ್ರತಂಡದ ಜತೆಗೆ ಶಿವರಾಜ್ ಕುಮಾರ್ ಭೇಟಿ ನೀಡಿ ಪ್ರೇಕ್ಷಕರ ಪ್ರತಿಕ್ರಿಯೆ ನೋಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ವಿಲನ್ ಸಿನಿಮಾ ಬಗ್ಗೆ ಕೇಳಿದ ಪ್ರಶ್ನೆಗೆ ಕಿಚ್ಚ ಸುದೀಪ್ ಹೀಗೆ ಹೇಳಿಬಿಟ್ಟರೇಕೆ?!