ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ವೇದಾ ಸಿನಿಮಾ ಈ ಮೊದಲೇ ಘೋಷಣೆಯಾಗಿತ್ತು. ಇದೀಗ ಆ ಸಿನಿಮಾ ತಂಡದಿಂದ ಹೊಸ ಸುದ್ದಿಯೊಂದು ಬಂದಿದೆ.
ಭಜರಂಗಿ 2 ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ವೇದಾ ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆಯಲಿದೆ. ನವಂಬರ್ 8 ರಂದು ವೇದಾ ಮುಹೂರ್ತ ಕಾರ್ಯಕ್ರಮ ನಡೆಯಲಿದೆ.
ಎ ಹರ್ಷ-ಶಿವಣ್ಣ ಕಾಂಬಿನೇಷನ್ ನಲ್ಲಿ ಮೂಡಿಬರಲಿರುವ ನಾಲ್ಕನೇ ಸಿನಿಮಾ ಇದಾಗಿದೆ. ಗೀತಾ ಶಿವರಾಜ್ ಕುಮಾರ್ ನಿರ್ಮಾಣದಲ್ಲಿ ಸಿನಿಮಾ ಮೂಡಿಬರುತ್ತಿದೆ. 1960 ರ ವಿಶಿಷ್ಟ ಕತೆಯುಳ್ಳ ಸಿನಿಮಾ ಇದಾಗಲಿದ್ದು, ಶಿವಣ್ಣ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.