Publish Date: Fri, 13 Oct 2017 (08:45 IST)
Updated Date: Fri, 13 Oct 2017 (08:47 IST)
ಬೆಂಗಳೂರು: ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿ ಸದ್ಯ ವಿಶ್ರಾಂತಿಯಲ್ಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ಕೊಟ್ಟ ಶಿವಣ್ಣ, ಆರೋಗ್ಯದ ಬಗ್ಗೆ ಗಮನಕೊಡುವಂತೆ ಕುಮಾರಸ್ವಾಮಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಸಿನಿಮಾ ನಿರ್ಮಾಪಕರೂ ಆಗಿರುವುದರಿಂದ ಕುಮಾರಸ್ವಾಮಿ ಜತೆ ಚಿತ್ರರಂಗಕ್ಕೆ ಹತ್ತಿರದ ನಂಟಿದೆ.
ಶಿವರಾಜ್ ಕುಮಾರ್ ಜತೆಗೆ ಮಧು ಬಂಗಾರಪ್ಪ ಕೂಡಾ ಇದ್ದರು. ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಕುಮಾರಸ್ವಾಮಿ ಇದೀಗ ಜೆಪಿ ನಗರದ ಸ್ವಗೃಹದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ