Webdunia - Bharat's app for daily news and videos

Install App

ನಟ ಸಲ್ಮಾನ್ ಮನೆ ಮೇಲೆ ಗುಂಡಿನ ದಾಳಿ: ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಜೌಟ್ ನೋಟಿಸ್

Sampriya
ಶನಿವಾರ, 27 ಏಪ್ರಿಲ್ 2024 (14:42 IST)
ಮುಂಬೈ: ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಮನೆ ಹೊರಗೆ ನಡೆದ ಗುಂಡಿನ ದಾಳಿ ಸಂಬಂಧ  ಜೈಲಿನಲ್ಲಿರುವ ಪಾತಕಿ ಲಾರೆನ್ಸ್ ಬಿಷ್ಣೋಯ್ ಅವರ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್‌ ಔಟ್ ನೋಟಿಸ್ ಜಾರಿ ಮಾಡಲಾಗಿದೆ.

ಸಲ್ಮಾನ್‌ ಖಾನ್ ನಿವಾಸದ ಬಳಿ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯ್ ಮತ್ತು ಅನ್ಮೋಲ್ ಬಿಷ್ಣೋಯ್ ಅವರನ್ನು ಪ್ರಮುಖ ಆರೋಪಿಗಳೆಂದು ಘೋಷಿಸಲಾಗಿದೆ. ಸದ್ಯ ಕೆನಡಾದಲ್ಲಿರುವ ಅನ್ಮೋಲ್, ಅಮೆರಿಕಕ್ಕೆ ಪ್ರಯಾಣಿಸುತ್ತಿದ್ದಾನೆ. ಹಾಗಾಗಿ ಆತನ ವಿರುದ್ಧ ಲುಕ್‌ ಔಟ್ ನೋಟಿಸ್ ಹೊರಡಿಸಲಾಗಿದೆ ಎಂದು ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಪೊಲೀಸ್ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ತಿಳಿಸಿ, ಪ್ರಕರಣ ಸಂಬಂಧ ಗುಜರಾತ್‌ನ ಸಬರಮತಿ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಅವರನ್ನು ಮುಂಬೈ ಪೊಲೀಸರು ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದಿದದಾರೆ.

ಈಗಾಗಲೇ ಪ್ರಕರಣ ಸಂಬಂಧ ಶೂಟರ್‌ಗಳಾದ ಸಾಗರ್ ಪಾಲ್ (21) ಮತ್ತು ವಿಕ್ಕಿ ಗುಪ್ತಾಗೆ ಪಿಸ್ತೂಲ್‌ಗಳು ಮತ್ತು ಗುಂಡುಗಳನ್ನು ಪೂರೈಸಿರುವ ಆರೋಪದ ಮೇರೆಗೆ ಸುಭಾಷ್‌ ಚಂದರ್‌ (37) ಮತ್ತು ಅನೂಜ್‌ ತಪನ್‌ (32) ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೋ ಲಾಂಗ್ ವ್ಯಾಲಿ ಸಿನಿಮಾದ ಪ್ರೀಮಿಯರ್ ಶೋ ವೇಳೆ ನಿರ್ದೇಶಕನಿಗೆ ನಟಿ ರುಚಿ ಗುಜ್ಜರ್ ಕಪಾಳಮೋಕ್ಷ

ತಾನು ನಿಜಜೀವನದಲ್ಲೂ ಹಿರೋಯಿನ್‌ ಎಂದು ಡಿ ಬಾಸ್‌ ಅಭಿಮಾನಿಗಳ ಕಾಲೆಳೆದು, ಮತ್ತೊಂದು ಸವಾಲು ಹಾಕಿದ ರಮ್ಯಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಮುಂದಿನ ಸುದ್ದಿ
Show comments