ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇನದ ಸ.ಹಿ.ಪ್ರಾ. ಶಾಲೆ ಕಾಸರಗೋಡು ಸಿನಿಮಾ ರಾಜ್ಯೋತ್ಸವದ ಸಂದರ್ಭದಲ್ಲಿ ಮತ್ತೆ ಬಿಡುಗಡೆಯಾಗಿದೆ.
ಗಡಿನಾಡು ಕಾಸರಗೋಡಿನಲ್ಲಿ ಕನ್ನಡ ಶಾಲೆಗಳ ದುಸ್ಥಿತಿ ಬಗ್ಗೆ ಬೆಳಕು ಚೆಲ್ಲುವ ಕತೆ ಹೊಂದಿರುವ ಈ ಸಿನಿಮಾ ಭಾರೀ ಹಿಟ್ ಆಗಿತ್ತು. ಲಾಕ್ ಡೌನ್ ಬಳಿಕ ಥಿಯೇಟರ್ ತೆರೆದ ಬೆನ್ನಲ್ಲೇ ಈ ಸಿನಿಮಾವನ್ನು ವೀಕ್ಷಕರ ಒತ್ತಾಯದ ಮೇರೆಗೆ ಮತ್ತೆ ಬಿಡುಗಡೆ ಮಾಡಲಾಗುತ್ತಿದೆ. ಬೆಂಗಳೂರು, ಹುಬ್ಬಳ್ಳಿ, ಮಂಗಳೂರಿನ ಕೆಲವು ಥಿಯೇಟರ್ ಗಳಲ್ಲಿ ಸಿನಿಮಾ ರಿ ರಿಲೀಸ್ ಆಗುತ್ತಿದೆ.