Select Your Language

Notifications

webdunia
webdunia
webdunia
webdunia

ಮೀಟೂ ಆರೋಪದ ಪೋಸ್ಟ್ ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದವರ ವಿರುದ್ಧ ದೂರು ನೀಡಿದ ಶೃತಿ ಹರಿಹರನ್

ಮೀಟೂ ಆರೋಪದ ಪೋಸ್ಟ್ ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದವರ ವಿರುದ್ಧ ದೂರು ನೀಡಿದ ಶೃತಿ ಹರಿಹರನ್
ಬೆಂಗಳೂರು , ಸೋಮವಾರ, 29 ಅಕ್ಟೋಬರ್ 2018 (14:09 IST)
ಬೆಂಗಳೂರು : ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ಶೃತಿ ಹರಿಹರನ್ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಬಾರೀ ಟೀಕೆಗಳು ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಇದೀಗ ಶೃತಿ ಹರಿಹರನ್ ಟೀಕೆ ಮಾಡಿದವರ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.


ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ವಿರುದ್ಧ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮೀಟೂ ಆರೋಪ ಮಾಡಿ ಪೋಸ್ಟ್ ಹಾಕಿದ್ದರು. ಇದಕ್ಕೆ ಸುಮಾರು 700 ಕ್ಕೂ ಹೆಚ್ಚು ಕಮೆಂಟ್ ಗಳು ಬಂದಿದ್ದು ಅದರಲ್ಲಿ ಕೆಲವರು ಶೃತಿ ಅವರನ್ನು ಕೀಳುಮಟ್ಟದಲ್ಲಿ ಟೀಕಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕೋಪಗೊಂಡ ಶೃತಿ ಹರಿಹರನ್ ಇದೀಗ ಕೆಟ್ಟದಾಗಿ ಕಾಮೆಂಟ್ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಲೈಂಗಿಕ ಕಿರುಕುಳ ಪ್ರಕರಣ; ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಿರುವ ಅರ್ಜುನ್ ಸರ್ಜಾ