Publish Date: Wed, 10 Jun 2026 (12:34 IST)
Updated Date: Wed, 10 Jun 2026 (12:37 IST)
ಬೆಂಗಳೂರು: ಪತಿ ಸುಮಂತ್ ಬಿಲ್ಲವ ಜೊತೆಗಿನ ವಿಚ್ಛೇದನ ವದಂತಿಗಳ ಬಗ್ಗೆ ಸ್ವತಃ ನಟಿ ಶುಭಾ ಪೂಂಜಾ ಈಗ ಸೋಷಿಯಲ್ ಮೀಡಿಯಾ ಮೂಲಕ ಪೋಸ್ಟ್ ಒಂದನ್ನು ಮಾಡಿದ್ದಾರೆ.
ಶುಭಾ ಪೂಂಜಾ ಮತ್ತು ಪತಿ ಸುಮಂತ್ ಬಿಲ್ಲವ ತಮ್ಮ ನಾಲ್ಕು ವರ್ಷಗಳ ದಾಂಪತ್ಯ ಜೀವನ ಮುರಿದುಕೊಳ್ಳಲು ಮುಂದಾಗಿದ್ದಾರೆ. ಇಬ್ಬರೂ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಸುದ್ದಿಯಾಗಿತ್ತು.
ಈ ಸುದ್ದಿ ಬಂದು ಒಂದು ವಾರದ ಬಳಿಕ ಶುಭಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಮನವಿಯೊಂದನ್ನು ಮಾಡಿದ್ದಾರೆ. ನನ್ನೆಲ್ಲಾ ಆತ್ಮೀಯ ಮಾಧ್ಯಮ ಮಿತ್ರರಿಗೆ ನಮಸ್ಕಾರಗಳು. ನಾನು ಚಿತ್ರರಂಗಕ್ಕೆ ಕಾಲಿಟ್ಟ ದಿನದಿಂದ ಇಂದಿನವರೆಗೂ ನನ್ನನ್ನು ಬೆಂಬಲಿಸುತ್ತಾ, ಪ್ರೋತ್ಸಾಹಿಸುತ್ತಾ ಬಂದಿದ್ದೀರಿ. ಇದೀಗ ನಾನು ಕೇಳಿಕೊಳ್ಳುವುದು ಇಷ್ಟೇ, ಸಮಯ ಬಂದಾಗ ನನ್ನ ವೈಯಕ್ತಿಕ ಜೀವನದಲ್ಲಿ ನಡೆಯುತ್ತಿರುವ ವಿಷಯದ ಬಗ್ಗೆ ನಾನೇ ಖುದ್ದಾಗಿ ತಿಳಿಸುತ್ತೇನೆ. ಅಲ್ಲಿಯವರೆಗೂ ನನಗೂ ಹಾಗೂ ಸುಮಂತ್ ಅವ್ರಿಗೂ ಸ್ವಲ್ಪ ಸಮಯಾವಕಾಶ ಕೊಡಿ ಎಂದು ಮನವಿ ಮಾಡುತ್ತೇನೆ ಎಂದು ಕೇಳಿಕೊಂಡಿದ್ದಾರೆ.
ಈ ಮೂಲಕ ವಿಚ್ಛೇದನ ವಿಚಾರವನ್ನು ಪರೋಕ್ಷವಾಗಿ ಖಚಿತಪಡಿಸಿದಂತೂ ಇದೆ. ಆದರೆ ಸದ್ಯಕ್ಕೆ ಯಾವುದೇ ವಿಚಾರದ ಬಗ್ಗೆ ಏನೂ ಹೇಳುವ ಹಾಗಿಲ್ಲ. ಇದೆಲ್ಲದಕ್ಕೂ ಮುಂದೆ ಅವರೇ ಸ್ಪಷ್ಟನೆ ನೀಡಲಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ