ಹೈದರಾಬಾದ್: ಸೈನಾ ನೆಹ್ವಾಲ್ ವಿರುದ್ಧ ಅವಹೇಳನಕಾರಿ ಟ್ವೀಟ್ ಪ್ರಕರಣ ನಟ ಸಿದ್ಧಾರ್ಥ್ ರನ್ನು ಬಿಡುವಂತೆ ಕಾಣುತ್ತಿಲ್ಲ. ಸೈನಾ ಬಳಿ ಬಹಿರಂಗವಾಗಿ ಕ್ಷಮೆ ಯಾಚಿಸಿದರೂ ಕಂಟಕ ಹಿಂಬಾಲಿಸುತ್ತಿದೆ.
ಈ ಬಗ್ಗೆ ಕೇಸ್ ದಾಖಲಾಗಿತ್ತು. ಹೀಗಾಗಿ ಸಿದ್ಧಾರ್ಥ್ ಈಗ ಚೆನ್ನೈನ ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳಿಗೆ ಕರೆ ಮಾಡಿ ಕ್ಷಮೆ ಕೇಳಿದ್ದಾರೆ.
ಇದು ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆಯಾಗಿರಲಿಲ್ಲ. ಈ ಬಗ್ಗೆ ಕ್ಷಮೆ ಯಾಚಿಸುತ್ತೇನೆ ಎಂದು ಫೋನ್ ಮುಖಾಂತರ ಅಧಿಕಾರಿಗಳ ಬಳಿ ಕ್ಷಮೆ ಕೇಳಿದ್ದಾರೆ.