Publish Date: Sun, 12 Jul 2026 (19:52 IST)
Updated Date: Sun, 12 Jul 2026 (19:56 IST)
ಮೈಸೂರು : ಶನಿವಾರ ರಾತ್ರಿ ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದ ಬಹುಭಾಷಾ ಗಾಯಕಿ ಗಾನಕೋಗಿಲೆ ಎಸ್ ಜಾನಕಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಮೈಸೂರು ನೆಲದಲ್ಲಿಯೇ ತಾನೂ ಮಣ್ಣಗಾಬೇಕೆಂಬ ಎಸ್ ಜಾನಕಿ ಆಸೆಯಂತೆಯೇ ಎಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿ ಫಾರಂ ಹೌಸ್‌ನಲ್ಲಿ ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸಲಾಯಿತು.
ಮೊಮ್ಮಗಳು ಅಪ್ಸರಾ ಅಜ್ಜಿಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಶ್ರೀರಂಗಪಟ್ಟಣದ ರಮೇಶ್ ಶರ್ಮಾ ಹಾಗೂ ಶಾಶ್ವತಿ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆದವು. ಮೈಸೂರು ಜಿಲ್ಲಾಡಳಿತದ ವತಿಯಿಂದ ಪೊಲೀಸ್ ಗೌರವವನ್ನು ಸಲ್ಲಿಸುವ ಮೂಲಕ ಗಾನಕೋಗಿಲೆಗೆ ಭಾವಪೂರ್ಣ ವಿದಾಯ ಹೇಳಲಾಯಿತು.
ಸರಕಾರದ ಪರವಾಗಿ ಮೈಸೂರು ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಸಂಗೀತ ನಿರ್ದೇಶಕ ಹಂಸಲೇಖ ಇದ್ದರು.
ಇನ್ನೂ ಇಂದು ಬೆಳಗ್ಗೆಯಿಂದಲೇ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಂಜೆಯವರೆಗೆ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮೈಸೂರಿನಿಂದ ಕಣಿಯನಹುಂಡಿ ಗ್ರಾಮಕ್ಕೆ ಸಾಗಿದ ವೇಳೆ ಹತ್ತಾರು ಗ್ರಾಮಗಳ ಜನರು ಅಂತಿಮ ದರ್ಶನ ಪಡೆದುಕೊಂಡರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ