ಬೆಂಗಳೂರು: ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿನ್ನೆ ರಾತ್ರಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ವ್ಯವಸ್ಥೆ ಮಾಡಲಾಗಿದೆ. ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು, ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ಬಿದ್ದೀಯಬ್ಬೆ ಮುದುಕಿ, ಕೋಡಗನ ಕೋಳಿ ನುಂಗಿತ್ತಾ, ಕಾಡು ಕುದುರೆ ಓಡಿ ಬಂದಿತ್ತಾ ಮುಂತಾದ ಜನಪ್ರಿಯ ಹಾಡುಗಳನ್ನು ಹಾಡಿದ್ದ ಸುಬ್ಬಣ್ಣ ಅತ್ಯುತ್ತಮ ಗಾಯನಕ್ಕೆ ರಾಷ್ಟ್ರಪ್ರಶಸ್ತಿಯನ್ನೂ ಪಡೆದಿದ್ದರು.