ಹೈದರಾಬಾದ್: ಬಹುಭಾಷಾ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಸಿನಿಮಾ ನಟಿಯರ ಬಗ್ಗೆ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ತೆಲುಗು ಸಿನಿಮಾ ಸಂಬಂಧಿತ ಕಾರ್ಯಕ್ರಮವೊಂದರಲ್ಲಿ ಎಸ್ ಪಿ ಬಿ ಅವರು ಈಗಿನ ನಟಿಯರ ವಸ್ತ್ರಧಾರಣೆ ಬಗ್ಗೆ ಕಾಮೆಂಟ್ ಮಾಡಿದ್ದಾರೆ ಎನ್ನಲಾಗಿದೆ. ಈಗಿನ ನಟಿಯರಿಗೆ ಸಿನಿಮಾ ಕಾರ್ಯಕ್ರಮಗಳಲ್ಲಿ ಹೇಗಿರುವ ಬಟ್ಟೆ ಹಾಕಿಕೊಳ್ಳಬೇಕೆಂದೇ ಗೊತ್ತಿಲ್ಲ ಎಂದು ಎಸ್ ಪಿ ಬಿ ಕಿಡಿ ಕಾರಿದ್ದಾಗಿ ಮಾಧ್ಯಮ ವರದಿ ಮಾಡಿದೆ.
‘ಈ ನಟಿಯರು ಕನಿಷ್ಠ ವಸ್ತ್ರ ಹಾಕಿಕೊಂಡು ಬಂದರೆ ಮಾತ್ರ ತಾವು ಹೀರೋಯಿನ್ ಗಳು, ತಮಗೆ ನಿರ್ದೇಶಕರು ಛಾನ್ಸ್ ಕೊಡ್ತಾರೆ ಎಂದುಕೊಂಡಿದ್ದಾರೆ. ಆದರೆ ಇವರಿಗೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹೇಗೆ ಬರಬೇಕೆಂದೇ ಗೊತ್ತಿಲ್ಲ’ ಎಂದು ಕಾಮೆಂಟ್ ಮಾಡಿದ್ದಾರೆಂದು ಮಾಧ್ಯಮ ವರದಿ ತಿಳಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!