Publish Date: Thu, 16 Nov 2023 (08:50 IST)
Updated Date: Thu, 16 Nov 2023 (09:09 IST)
Photo Courtesy: Instagram
ಬೆಂಗಳೂರು: ಸ್ಯಾಂಡಲ್ ವುಡ್ ಗಾಯಕ, ಸಂಗೀತ ನಿರ್ದೇಶಕ ವಾಸುಕಿ ವೈಭವ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಸುದ್ದಿಯನ್ನು ಅವರೇ ಈಗ ಖಚಿತಪಡಿಸಿದ್ದಾರೆ.
ತಮ್ಮ ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಜೊತೆ ವಾಸುಕಿ ಹಸೆಮಣೆ ಏರುತ್ತಿದ್ದಾರೆ. ಈಗಾಗಲೇ ಮದುವೆ ಶಾಸ್ತ್ರಗಳು ಆರಂಭವಾಗಿದೆ. ಬೃಂದಾ ಜೊತೆಗಿರುವ ಫೋಟೋವನ್ನೂ ವಾಸುಕಿ ಪ್ರಕಟಿಸಿದ್ದು, ಹೊಸ ಪಯಣ ಆರಂಭವಾಗಿದೆ. ನಿಮ್ಮೆಲ್ಲರ ಆಶೀರ್ವಾದ ಮತ್ತು ಹಾರೈಕೆ ಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ರಂಗಭೂಮಿ ಹಿನ್ನಲೆಯುಳ್ಳ ಬೃಂದಾ ಶಿಕ್ಷಕಿಯೂ ಹೌದು. ಬಹಳ ಸಮಯದಿಂದ ವಾಸುಕಿ ಮತ್ತು ಬೃಂದಾ ಪರಸ್ಪರ ಪ್ರೀತಿಸುತ್ತಿದ್ದರು. ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.