39ನೇ ವಯಸ್ಸಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ಕಿರುತೆರೆ ನಟಿ ʼಸಿರಿʼ

sampriya
ಶುಕ್ರವಾರ, 14 ಜೂನ್ 2024 (15:52 IST)
Photo By Instagram
ಬೆಂಗಳೂರು: ಕಳೆದ 30 ವರ್ಷಗಳಿಂದ ಕನ್ನಡ ಕಿರುತೆರೆಯಲ್ಲಿ ಮಿಂಚುತ್ತಿರುವ, ಬಿಗ್‌ಬಾಸ್‌ ಖ್ಯಾತಿಯ ಸಿರಿ ಅವರು ತಮ್ಮ 39 ನೇ ವಯಸ್ಸಿನಲ್ಲಿ ಇದೀಗ ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ, ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.  

ಬಿಗ್ ಬಾಸ್ ಕನ್ನಡ ಸೀಸನ್‌ 10 ರಲ್ಲಿ ಮಿಂಚಿದ್ದ ಸಿರಿ ಅವರಿಗೆ ಮದುವೆ ಆಗುವಂತೆ ಅವರ ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅದಲ್ಲದೆ ಒಳ್ಳೆಯ ಹುಡುಗ ಸಿಕ್ಕರೆ ಮದುವೆಯಾಗುವುದಾಗಿ ಬಿಗ್‌ಬಾಸ್‌ ವೇದಿಕೆಯಲ್ಲೂ ಹೇಳಿಕೊಂಡಿದ್ದರು. ಇದಿಗ ಅದರಂತೆ ಉದ್ಯಮಿ ಪ್ರಭಾಕರ್‌ ಬೋರೆಗೌಡ ಅವರನ್ನು ಮದುವೆಯಾಗಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.

40 ವರ್ಷವಾದರು ಸಿಂಗಲ್‌ ಆಗಿದ್ದ ಸಿರಿ ಅವರಲ್ಲಿ ಯಾಕೆ ಮದುವೆ ಆಗಿಲ್ಲ ಎಂಬ ಪ್ರಶ್ನೆಗಳನ್ನು ಎಲ್ಲರು ಕೇಳುತ್ತಿದ್ದರು. ಇದೀಗ ಸಿರಿ ಅವರ ಮದುವೆ ಹಾಗೂ ಅರಿಶಿನದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.   ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದಲ್ಲಿನ ಭೋಗ ನಂದೀಶ್ವರ ದೇವಾಲಯದಲ್ಲಿ ಸಿರಿ ಮತ್ತು ಉದ್ಯಮಿ ಪ್ರಭಾಕರ್ ಮದುವೆ ಗುರುಹಿರಿಯರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.  ಪ್ರಭಾಕರ್ ಅವರು ಮೂಲತಃ ಮಂಡ್ಯದವರಾಗಿದ್ದು, ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ದರ್ಶನ್ ಫ್ಯಾನ್ಸ್ ನಿಂದ ನ್ಯಾಯಾಧೀಶರೇ ಗರಂ: ಮಹತ್ವದ ತೀರ್ಮಾನಕ್ಕೆ ಸಿದ್ಧತೆ video

ಮುಂದಿನ ಸುದ್ದಿ
Show comments