Webdunia - Bharat's app for daily news and videos

Install App

ಅಪ್ಪು ಅರ್ಧಕ್ಕೆ ಬಿಟ್ಟ ಚಿತ್ರಗಳ ಬಗ್ಗೆ ಶಿವಣ್ಣನ ಮಾತು

Webdunia
ಸೋಮವಾರ, 1 ನವೆಂಬರ್ 2021 (20:22 IST)
ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಪುನೀತ್ ರಾಜ್ಕುಮಾರ್ ಅವರು ಹಲವು ಪ್ರಾಜೆಕ್ಟ್ಗಳಲ್ಲಿ ತೊಡಗಿಕೊಂಡಿದ್ದರು.
ಆ ಪೈಕಿ ‘ಜೇಮ್ಸ್’ ಸಿನಿಮಾ ಬಗ್ಗೆ ಫ್ಯಾನ್ಸ್ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಅವರು ಈ ಸಿನಿಮಾದ ಬಹುತೇಕ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಆದರೆ ಡಬ್ಬಿಂಗ್ ಪೂರ್ಣಗೊಳ್ಳುವುದಕ್ಕೂ ಮುನ್ನವೇ ಪುನೀತ್ ರಾಜ್ಕುಮಾರ್ ಇಹಲೋಕ ತ್ಯಜಿಸಿದ್ದಾರೆ. ಹಾಗಾದರೆ ಈ ಚಿತ್ರದಲ್ಲಿನ ಪುನೀತ್ ಪಾತ್ರಕ್ಕೆ ಧ್ವನಿ ನೀಡುವವರು ಯಾರು? ಈ ಬಗ್ಗೆ ಶಿವರಾಜ್ಕುಮಾರ್ ಮಾತನಾಡಿದ್ದಾರೆ.
ಶಿವರಾಜ್ಕುಮಾರ್ ಧ್ವನಿ ನೀಡಲಿ ಎಂಬ ಆಸೆಯನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ. ಆ ಕುರಿತು ತಮ್ಮ ಅಭಿಪ್ರಾಯ ಏನು ಎಂಬುದನ್ನು ಶಿವಣ್ಣ ತಿಳಿಸಿದ್ದಾರೆ. ‘ಈವರೆಗೂ ನನ್ನ ಬಳಿ ಆ ರೀತಿಯ ಯಾವುದೇ ಪ್ರಸ್ತಾಪ ಬಂದಿಲ್ಲ. ಒಂದು ವೇಳೆ ಬಂದರೆ ಖಂಡಿತ ಮಾಡುವುದರಲ್ಲಿ ತಪ್ಪಿಲ್ಲ. ನನ್ನ ತಮ್ಮನಿಗೆ ವಾಯ್ಸ್ ಕೊಡಲು ನನಗೆ ನಿಜವಾಗಿಯೂ ಹೆಮ್ಮೆ ಎನಿಸುತ್ತದೆ’ ಎಂದು ಶಿವರಾಜ್ಕುಮಾರ್ ಹೇಳಿದ್ದಾರೆ. ಮಾ.17 ಪುನೀತ್ ರಾಜ್ಕುಮಾರ್ ಬರ್ತ್ಡೇ. ಆ ದಿನವೇ ‘ಜೇಮ್ಸ್’ ರಿಲೀಸ್ ಮಾಡಬೇಕು ಎಂದು ಚಿತ್ರತಂಡ ಗುರಿ ಇಟ್ಟುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments