ಪುಷ್ಪ 2 ನಲ್ಲಿ ಕೆಲವು ದೃಶ್ಯಗಳನ್ನು ನೋಡಿದ್ರೆ ನಡುಕ ಬರೋದು ಗ್ಯಾರಂಟಿ!

Webdunia
ಶುಕ್ರವಾರ, 24 ನವೆಂಬರ್ 2023 (09:40 IST)
ಹೈದರಾಬಾದ್: ಅಲ್ಲು ಅರ್ಜುನ್ ನಾಯಕರಾಗಿರುವ ಬಹುನಿರೀಕ್ಷಿತ ಪುಷ್ಪ 2 ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇದೀಗ ಚಿತ್ರದ ಬಗ್ಗೆ ಸಂಗೀತ ನಿರ್ದೇಶಕ ಡಿಎಸ್ ಪಿ ಕೆಲವು ಇಂಟ್ರೆಸ್ಟಿಂಗ್ ವಿಚಾರ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಹೈದರಾಬಾದ್ ನ ರಾಮೋಜಿರಾವ್ ಫಿಲಂ ಸಿಟಿಯಲ್ಲಿ ವಿಶೇಷ ಸೆಟ್ ನಲ್ಲಿ ಅಲ್ಲು ಅರ್ಜುನ್ ಪಾಲ್ಗೊಂಡಿದ್ದ ಜಾತ್ರ ದೃಶ್ಯದ ಚಿತ್ರೀಕರಣವಾಗುತ್ತಿತ್ತು. ಈ ದೃಶ್ಯದಲ್ಲಿ ಅಲ್ಲು ಕೆಲವೊಂದು ಭೀಭತ್ಸ ಸಾಹಸ ದೃಶ್ಯಗಳಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗಿದೆ.

ಇದರ ನಡುವೆ ಪುಷ್ಪ 2 ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್, ಈ ಸಿನಿಮಾದ ಕೆಲವೊಂದು ದೃಶ್ಯ ನೋಡ್ತಿದ್ದರೆ ಪ್ರೇಕ್ಷಕರಿಗೆ ಬೆನ್ನು ಹುರಿಯಲ್ಲಿ ನಡುಕ ಬರೋದು ಗ್ಯಾರಂಟಿ ಎಂದಿದ್ದಾರೆ.

ಜಾತ್ರ ಸೀನ್ ನಲ್ಲಿ ಅಲ್ಲು ಅರ್ಜುನ್ ವಿಶೇಷ ಗೆಟಪ್ ನಲ್ಲಿ ಮಾಡಿರುವ ಸಾಹಸ ದೃಶ್ಯಗಳು ಚಿತ್ರದ ಹೈಲೈಟ್ ಆಗಲಿವೆ. ಈ ದೃಶ್ಯಗಳನ್ನು ನೋಡ್ತಿದ್ದರೆ ಪ್ರೇಕ್ಷಕರಿಗೆ ನಡುಕ ಬರಲಿದೆ ಎಂದಿದ್ದಾರೆ. ಈ ಸಿನಿಮಾಗಾಗಿ ಅಲ್ಲು ಅರ್ಜುನ್ ಮತ್ತು ಇಡೀ ಚಿತ್ರತಂಡ ಸಾಕಷ್ಟು ಹೋಂ ವರ್ಕ್ ಮಾಡಿಕೊಂಡಿದೆ. ಜೊತೆಗೆ ಸಂಗೀತವೂ ಕ್ಲೈಮ್ಯಾಕ್ಸ್ ನಲ್ಲಿ ಮುಖ್ಯ ಪಾತ್ರ ವಹಿಸಲಿದೆಯಂತೆ. ಮುಂದಿನ ವರ್ಷ ಆಗಸ್ಟ್ 15 ರಂದು ಚಿತ್ರ ರಿಲೀಸ್ ಆಗಲಿದೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮುಂದಿನ ಸುದ್ದಿ
Show comments