Webdunia - Bharat's app for daily news and videos

Install App

ನನ್ನಿಂದ ಇನ್ನೊಬ್ಬರಿಗೆ ನೋವಾಗಿದೆ, ಜಸ್ಟ್ ಚಾನ್ಸ್ ಕೇಳ್ತಿದ್ದೀನಿ: ಸಪ್ತಮಿ ಗೌಡ ಆಡಿಯೋ ವೈರಲ್

Sampriya
ಭಾನುವಾರ, 23 ಜೂನ್ 2024 (16:02 IST)
Photo Courtesy X
ಬೆಂಗಳೂರು:   ಶ್ರೀದೇವಿ ಅವರಿಗೆ ವಿಚ್ಚೇಧನದ ನೀಡುತ್ತಿರುವ ಸುದ್ದಿ ವೈರಲ್ ಆಗುತ್ತಿರುವ ಬೆನ್ನಲ್ಲೇ ನಟಿ ಸಪ್ತಮಿ ಗೌಡ ಜತೆ ಯುವ ರಾಜ್‌ಕುಮಾರ್ ಅವರು ಕಿರುಬೆರಳ ಆಟವಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ನಡುವೆ ಇದೀಗ ಸಪ್ತಮಿ ಗೌಡ ಅವರದ್ದು ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ.

ಸಪ್ತಮಿ ಗೌಡ ಅವರದ್ದು ಎನ್ನಲಾದ ಆಡಿಯೋದಲ್ಲಿ ಏನಿದೆ:

ನನ್ನ ಸೈಡ್ ಆಫ್ ದಿ ಸ್ಟೋರಿನೂ ಕೇಳಿ. ನನ್ನಿಂದ ತಪ್ಪಾಗಿಲ್ಲ ಎಂದು ನಾನು ಹೇಳ್ತಿಲ್ಲ. ಖಂಡಿತ ನನ್ನಿಂದ ತಪ್ಪಾಗಿದೆ. ನನ್ನ ಅಮ್ಮನ ಮೇಲೆ ಆಣೆ ಮಾಡಿ ಹೇಳ್ತೀನಿ ಸರ್ ನಾನು ಎಂದಿಗೂ ಸಹ ಗುರುನ (ಯುವ ಮೂಲ ಹೆಸರು) ಮದ್ವೆ ಬಿಟ್ಟು ಬಾ ಅಂತ ಯಾವತ್ತೂ ಹೇಳಿಲ್ಲ. ನೀವು ಬೇಕಿದ್ದರೆ ಅವನನ್ನು ಕೇಳಬಹುದು. ಯಾರನಾದರೂ ಕೇಳಬಹುದು. ಇದನ್ನ ವರ್ಕೌಟ್ ಮಾಡು ಇದು ತಪ್ಪಾಗುತ್ತೆ ಬೇಡ
ಎಂದು ನಾನು ತುಂಬಾ ಸಲ ಹೇಳಿದೀನಿ. ಹೌದು ಇದು ನಿಮ್ಮ ಸೆಟ್‌ನಲ್ಲಿ ಆಯ್ತು ಅದಕ್ಕೆ ನಿಮಗೆ ನಮ್ಮ ಮೇಲೆ ಎಷ್ಟೇ ಕೋಪ ಇರಬಹುದು ಸರ್ ಪರವಾಗಿಲ್ಲ ಆದರೆ ನನ್ನ ಸೈಡ್ ಆಫ್ ದಿ ಸ್ಟೋರಿಯನ್ನೂ ಕೇಳಿ ಎಂಬ ಮಾತು ಆಡಿಯೋದಲ್ಲಿದೆ.

100% ನಾನು ಮಧ್ಯ ಬರಲ್ಲ ಸರ್:
ಗುರುದು ಫಸ್ಟ್ ಸಿನಿಮಾ. ನಿಮಗೂ ಸಹ ಬಹಳ ಮುಖ್ಯವಾದ ಸಿನಿಮಾ. ಎಲ್ಲರೂ ಕಷ್ಟ ಪಟ್ಟು ಮಾಡಿರುವ ಸಿನಿಮಾ. 100% ನಾನು ಮಧ್ಯ ಬರಲ್ಲ ಸರ್. ನಾನು ಇದನ್ನು ಇನ್ನಷ್ಟು ಕಾಂಪ್ಲೆಕ್ಸ್ ಮಾಡುವುದಿಲ್ಲ. ಬೈಯ್ಯುವುದಾದರೆ ಬೈಯ್ಯಿರಿ ಆದರೆ ನನ್ನ ಸೈಡ್ ಆಫ್ ದಿ ಸ್ಟೋರಿ ಸಹ ದಯವಿಟ್ಟು ಕೇಳಿಸಿಕೊಳ್ಳಿ. ಯಾವತ್ತಾದರೂ ಸಪ್ತಮಿ ಇಷ್ಟು ಕೆಟ್ಟವಳ ಎಂದು ಅಂದುಕೊಳ್ಳುವ ಮುಂಚೆ ಏನಾಯಿತು ಎಂದು ನನ್ನಿಂದ ಒಮ್ಮೆ ಕೇಳಿಸಿಕೊಳ್ಳಿ' ಎಂಬ ಮಾತುಗಳು ಆಡಿಯೋನಲ್ಲಿವೆ.

ಹೌದು ಸರ್ ನನ್ನಿಂದ ಇನ್ನೊಬ್ಬರಿಗೆ ನೋವಾಗಿದೆ. ಆದರೆ ನಿಜವಾಗಿಯೂ ನಾನು ನಂಬಿ ಮಾಡಿದ್ದು ಸರ್ ಅದನ್ನ.ಗುರು ಬಂದು ನನ್ನ ಹತ್ರ ಅಷ್ಟು ಹೇಳಿದ ಮೇಲೆಯೇ ನಾನು ಮುಂದುವರೆದೆ. ಇಲ್ಲಾಂದ್ರೆ ನಾನು... ಸಾರಿ ಸರ್, ಜಸ್ಟ್ ಚಾನ್ಸ್ ಕೇಳ್ತಿದ್ದೀನಿ ಅಷ್ಟೇ ಸರ್ ಎಂಬ ಮಾತು ಕೂಡ ಈ ವೈರಲ್ ಆದ ಆಡಿಯೋದಲ್ಲಿದೆ.

ನಟ ಸಪ್ತಮಿ ಗೌಡ ಜತೆಗಿರುವ ಸಂಬಂಧದಿಂದಾಗಿ ಯುವರಾಜ್ ಕುಮಾರ್ ಅವರು ವಿಚ್ಚೇಧನ ನೀಡುತ್ತಿದ್ದಾರೆ ಎಂದು ಖುದ್ದು ಶ್ರೀದೇವಿ ಅವರು ಆರೋಪ ಮಾಡಿದ್ದರು. ಇನ್ನೂ ಈ ವಿಚಾರದಲ್ಲಿ ತನ್ನ ಹೆಸರನ್ನು ಬಳಸುತ್ತಿರುವುದರ ವಿರುದ್ಧ ಸಪ್ತಮಿ ಗೌಡ ಅವರು ಶ್ರೀದೇವಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಟ್ಟಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ನಟಿ ರಶ್ಮಿಕಾ, ವಿಜಯ್ ದೇವರಕೊಂಡ

2021 ರ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ರಕ್ಷಿತ್ ಶೆಟ್ಟಿ ಬೆಸ್ಟ್ ಆಕ್ಟರ್

ಅದ್ಧೂರಿ ಬರ್ತಡೇ ಸೆಲೆಬ್ರೇಶನ್ ಹಿಂದಿದೆಯಾ ರಾಜಕೀಯ ಎಂಟ್ರಿ, ಡಿಂಪಲ್ ಕ್ವೀನ್ ರಚಿತಾ ಏನಂದ್ರು ಗೊತ್ತಾ

ನನ್ನ ಮಗಳ ಜಾಗರೂಕತೆ ದೊಡ್ಡ ಅವಘಡ ತಪ್ಪಿಸಿತು: ಅಕ್ಷಯ್ ಕುಮಾರ್‌

ಕಾಂತಾರಾ ಅಧ್ಯಾಯ 1 ನೋಡಿ ನಟ ರಿಷಭ್ ಶೆಟ್ಟಿ ಬಗ್ಗೆ ಪದಗಳಲ್ಲಿ ವರ್ಣಿಸಿದ ನಟ ಯಶ್‌

ಮುಂದಿನ ಸುದ್ದಿ
Show comments