Webdunia - Bharat's app for daily news and videos

Install App

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಸೋನಾಕ್ಷಿ: ಜಹೀರ್‌ ಜೊತೆ 23ರಂದು ಮದುವೆ

sampriya
ಸೋಮವಾರ, 10 ಜೂನ್ 2024 (14:23 IST)
Photo By X
ಮುಂಬೈ: ಬಾಲಿವುಡ್‌ನ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಅವರು ನಟ ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ.

ಸೋನಾಕ್ಷಿ ಮತ್ತು ಜಹೀರ್ ದಕ್ಷಿಣ ಮುಂಬೈನಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಆದರೆ, ಜೋಡಿ ಎಲ್ಲಿಯೂ ತಮ್ಮ ಮದುವೆ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

37 ವರ್ಷದ ಸೋನಾಕ್ಷಿ 2010ರಲ್ಲಿ ಸಲ್ಮಾನ್‌ ಖಾನ್‌ ಅಭಿನಯದ ʻದಬಾಂಗ್‌ʼ ಸಿನಿಮಾದ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದರೆ, ಜಹೀರ್ ಅವರ ಮೊದಲ ಚಿತ್ರ 2019ರಲ್ಲಿ ತೆರೆ ಕಂಡ ʻನೋಟ್‌ಬುಕ್ʼ ಆಗಿತ್ತು. ʻಡಬಲ್ ಎಕ್ಸ್‌ಎಲ್‌ʼ ಸಿನಿಮಾದಲ್ಲಿ ಜಹೀರ್ ಇಕ್ಬಾಲ್ ಹಾಗೂ ಸೋನಾಕ್ಷಿ ಸಿನ್ಹಾ ಒಟ್ಟಿಗೆ ಕಾಣಿಸಿಕೊಂಡಿದ್ದರು.

ಕಳೆದ ವಾರ ಸೋನಾಕ್ಷಿ ಅವರ ಜನ್ಮದಿನದಂದು ಜಹೀರ್ ಹಲವು ಫೋಟೊಗಳನ್ನು ಹಂಚಿಕೊಂಡಿದ್ದರು. ಮೊದಲ ಚಿತ್ರದಲ್ಲಿ ಸೋನಾಕ್ಷಿ ಅವರನ್ನು ಜಹೀರ್ ಬಿಗಿಯಾಗಿ ಅಪ್ಪಿಕೊಳ್ಳುವುದು ಇದೆ. ಜನ್ಮದಿನದ ಶುಭಾಶಯಗಳು ಸೋನಾ ಎಂದು ಶೀರ್ಷಿಕೆ ನೀಡಿದ್ದರು.

ಈ ಹಿಂದೆ ಸಲ್ಮಾನ್‌ ಖಾನ್‌ ಅವರ ಸಹೋದರಿ ಅರ್ಪಿತಾ ಖಾನ್‌ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಸೋನಾಕ್ಷಿಯನ್ನು ಅತ್ತಿಗೆ ಎಂದು ಕರೆದಿದ್ದರು. ಕೆಲವೇ ಕ್ಷಣಗಳಲ್ಲಿ ಆ ಸ್ಟೋರಿಯನ್ನು ಡಿಲೀಟ್‌ ಮಾಡಿದ್ದರು. ಆಗ ಸೋನಾಕ್ಷಿ ಹಾಗೂ ಜಹೀರ್‌ ನಡುವೆ ಸಂಬಂಧ ಇದೆ ಎಂಬ ಸುದ್ದಿ ಹರಿದಾಡಿತ್ತು.

ಸೋನಾಕ್ಷಿ ಹಾಗೂ ಜಹೀರ್ ಹಲವು ವರ್ಷಗಳಿಂದ ಸುತ್ತಾಟ ನಡೆಸುತ್ತಿದ್ದರೂ ಪ್ರೀತಿ ವಿಚಾರವನ್ನು ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಇವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಇವರು ಈಗ ವಿವಾಹ ಆಗುವ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments