ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಗೆ ಮುನ್ನ ಗುಳಿಗ ಕ್ಷೇತ್ರಕ್ಕೆ ಭೇಟಿ ಕೊಟ್ಟ ಸೋನಲ್ ಮೊಂಥೆರೋ

Krishnaveni K
ಶುಕ್ರವಾರ, 30 ಆಗಸ್ಟ್ 2024 (13:38 IST)
ಮಂಗಳೂರು: ಇತ್ತೀಚೆಗಷ್ಟೇ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದ ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮೊಂಥೆರೋ ಈಗ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಲಿದ್ದಾರೆ.

ಸೆಪ್ಟೆಂಬರ್ 1 ರಂದು ಸೋನಲ್ ಮತ್ತು ತರುಣ್ ಮಂಗಳೂರಿನ ಚರ್ಚ್ ನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಮತ್ತೊಮ್ಮೆ ಮದುವೆಯಾಗಲಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿ ತರುಣ್-ಸೋನಲ್ ಹಿಂದೂ ಸಂಪ್ರದಾಯದಂತೆ ಅದ್ಧೂರಿಯಾಗಿ ಮದುವೆಯಾಗಿದ್ದರು.

ಸೋನಲ್ ಮಂಗಳೂರು ಮೂಲದ ಕ್ರಿಶ್ಚಿಯನ್ ಧರ್ಮೀಯರಾಗಿದ್ದು, ಈಗ ಮೊದಲೇ ನಿಗದಿಯಾದಂತೆ ಅವರ ಸಂಪ್ರದಾಯದ ಪ್ರಕಾರವೂ ಮತ್ತೊಮ್ಮೆ ಮದುವೆಯಾಗಲಿದ್ದಾರೆ. ಇದಕ್ಕಾಗಿ ಸೋನಲ್ ನಿನ್ನೆಯೇ ಮಂಗಳೂರಿಗೆ ಬಂದಿಳಿದಿದ್ದಾರೆ. ತರುಣ್ ಕೂಡಾ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ನಿನ್ನೆ ಮಂಗಳೂರಿನ ಪಚ್ಚನಾಡಿ ಗ್ರಾಮದ ಪುಣ್ಯಕ್ಷೇತ್ರ ಶ್ರೀಮಂತ ರಾಜಗುಳಿಗ ಕ್ಷೇತ್ರಕ್ಕೆ ಭೇಟಿ ನೀಡಿದ ಸೋನಲ್ ಪ್ರಸಾದ ಸ್ವೀಕರಿಸಿದ್ದಾರೆ. ಈ ವೇಳೆ ತರುಣ್ ಜೊತೆಗಿರಲಿಲ್ಲ. ಇನ್ನೊಂದು ದಿನ ಪತಿ ತರುಣ್ ಜೊತೆಗೇ ಭೇಟಿ ನೀಡುವುದಾಗಿ ಸೋನಲ್ ಈ ಸಂದರ್ಭದಲ್ಲಿ ಹೇಳಿದ್ದಾರೆ.

ಇನ್ನು, ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ನಡೆಯಲಿರುವ ಮದುವೆ ತಯಾರಿಗಾಗಿ ಸೋನಲ್ ಈಗಾಗಲೇ ತಮ್ಮ ತವರಿಗೆ ಬಂದಿದ್ದಾರೆ. ಜ್ಯುವೆಲ್ಲರಿ, ಬಟ್ಟೆ ಶಾಪಿಂಗ್ ನಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಸೋನಲ್ ಆಪ್ತರು ಮಾತ್ರ ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments