Publish Date: Sun, 16 Aug 2020 (10:48 IST)
Updated Date: Sun, 16 Aug 2020 (10:50 IST)
ಚೆನ್ನೈ: ಕೊರೋನಾ ಸೋಂಕಿನಿಂದ ಆರೋಗ್ಯದಲ್ಲಿ ತೀವ್ರ ಏರುಪೇರಾಗಿರುವ ಕಾರಣಕ್ಕೆ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ‍್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂಗೆ ಐಸಿಯುವಿನಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ.
ಎಸ್ ಪಿಬಿ ಆರೋಗ್ಯ ಸ್ಥಿರವಾಗಿದ್ದು, ಈಗಲೂ ಜೀವ ರಕ್ಷಕ ಅಳವಡಿಸಲಾಗಿದೆ ಎನ್ನಲಾಗಿದೆ. ಎರಡು ದಿನಗಳ ಹಿಂದೆಗೆ ಹೋಲಿಸಿದರೆ ಈಗ ಅವರ ಸ್ಥಿತಿ ಕೊಂಚ ಸುಧಾರಿಸಿದೆ ಎನ್ನಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಎಸ್ ಪಿಬಿ ಶೀಘ್ರ ಚೇತರಿಕೆಗೆ ಸಿನಿಮಾ ಗಣ‍್ಯರು, ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.