Publish Date: Mon, 17 Aug 2020 (09:51 IST)
Updated Date: Mon, 17 Aug 2020 (09:52 IST)
ಬೆಂಗಳೂರು: ಕೊರೋನಾದಿಂದಾಗಿ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಎಸ್ ಪಿಬಿ ಈಗ ಸುಧಾರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸಾಕಷ್ಟು ಸುಧಾರಿಸಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ. ಹಾಗಿದ್ದರೂ ಐಸಿಯುವಿನಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ.
ಈ ನಡುವೆ, ಅವರ ಆರೋಗ್ಯ ಸುಧಾರಣೆಗಾಗಿ ಸಾಕಷ್ಟು ಸೆಲೆಬ್ರಿಟಿಗಳು, ಅಭಿಮಾನಿಗಳು ದೇಶದಾದ್ಯಂತ ಪ್ರಾರ್ಥನೆ ಮಾಡಿದ್ದರು. ಆದರೆ ಅವರ ಆರೋಗ್ಯದ ಬಗ್ಗೆ ಯಾವುದೇ ವದಂತಿಗಳನ್ನು ನಂಬಬೇಡಿ ಎಂದು ಪುತ್ರ ಎಸ್ ಪಿ ಚರಣ್ ಮನವಿ ಮಾಡಿದ್ದರು.