ಬೆಂಗಳೂರು: ನಿನ್ನೆ ಮುಂಜಾನೆ ಬ್ಯಾಂಕಾಕ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅಂತಿಮ ದರ್ಶನಕ್ಕೆ ಸಿದ್ಧತೆ ನಡೆಸಲಾಗಿದೆ.
ಇಂದು ಬ್ಯಾಂಕಾಕ್ ನಿಂದ ಸ್ಪಂದನಾ ಮೃತದೇಹ ಬೆಂಗಳೂರಿಗೆ ಬರಲಿದೆ. ನಿನ್ನೆ ಮರಣೋತ್ತರ ಪರೀಕ್ಷೆ ನಡೆದಿದ್ದು, ಔಪಚಾರಿಕ ಪ್ರಕ್ರಿಯೆಗಳು ಮುಗಿದ ಬಳಿಕ ಇಂದು ಮೃತದೇಹವನ್ನು ಬೆಂಗಳೂರಿಗೆ ಕರೆತರಲಾಗುತ್ತದೆ.
ಇದಾದ ಬಳಿಕ ಮಲ್ಲೇಶ್ವರದಲ್ಲಿರುವ ಸ್ಪಂದನಾ ತಂದೆ ಮನೆ, ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ. ಶಿವರಾಂ ಅವರ ನಿವಾಸದ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಚಿತ್ರರಂಗ, ರಾಜಕೀಯದ ಗಣ್ಯರು, ಅಭಿಮಾನಿಗಳು ಅಂತಿಮ ದರ್ಶನಕ್ಕೆ ಬರುವ ನಿರೀಕ್ಷೆಯಿದೆ. ಇದಾದ ಬಳಿಕ ನಾಳೆ ಅಂತಿಮ ಕ್ರಿಯೆ ನಡೆಯಲಿದೆ.