Webdunia - Bharat's app for daily news and videos

Install App

ದರ್ಶನ್ ಡೆವಿಲ್ ಸಿನಿಮಾ ಚಿತ್ರೀಕರಣಕ್ಕೆ ವಿಶೇಷ ಸೆಟ್

Krishnaveni K
ಬುಧವಾರ, 20 ಮಾರ್ಚ್ 2024 (12:39 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿರುವ ಡೆವಿಲ್ ಸಿನಿಮಾದ ಬಗ್ಗೆ ಅಭಿಮಾನಿಗಳ ಕುತೂಹಲಗಳಿಗೆ ಕೊನೆಗೂ ಬ್ರೇಕ್ ಸಿಕ್ಕಿದೆ.

ಡೆವಿಲ್ ಸಿನಿಮಾ ಇದೇ ಮಾರ್ಚ್ 22 ರಿಂದ ಶುರುವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ದರ್ಶನ್ ಹುಟ್ಟುಹಬ್ಬದಂದು ಡೆವಿಲ್ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿತ್ತು. ಈ ಫಸ್ಟ್ ಲುಕ್ ನಲ್ಲಿ ದರ್ಶನ್ ಖಡಕ್ ಮಾಸ್ ಪೋಸ್ ಕೊಟ್ಟಿದ್ದರು. ಜೊತೆಗೆ ಗ್ಯಾಂಗ್ ಸ್ಟರ್ ರೀತಿ ಕಾಣಿಸಿಕೊಂಡಿದ್ದಾರೆ.

ಹೀಗಾಗಿ ಚಿತ್ರದ ಬಗ್ಗೆ ಕುತೂಹಲ ಹೆಚ್ಚಾಗಿದೆ. ಪ್ರಕಾಶ್ ವೀರ್ ನಿರ್ದೇಶನ ಮಾಡಲಿರುವ ಡೆವಿಲ್ ಸಿನಿಮಾ ಪಕ್ಕಾ ದರ್ಶನ್ ಶೈಲಿಯ ಮಾಸ್ ಸಿನಿಮಾ ಎನ್ನುವುದರಲ್ಲಿ ಎರಡು ಮಾತಿಲ್ಲ. ಇದೀಗ ಮೊದಲ ಹಂತದ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆಯಲಿದೆ ಎಂದು ತಿಳಿದುಬಂದಿದೆ. ಮೊನ್ನೆಯಷ್ಟೇ ದರ್ಶನ್ ಡೆವಿಲ್ ಸಿನಿಮಾ ಶೂಟಿಂಗ್ ಗಾಗಿ ಹಾಕಲಾಗಿರುವ ವಿಶೇಷ ಸೆಟ್ ಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದರು. ಇದೀಗ 22 ರಿಂದ ಶೂಟಿಂಗ್ ನಲ್ಲಿ ಭಾಗಿಯಾಗುತ್ತಿದ್ದಾರೆ. ರಾಕ್ ಲೈನ್ ಸ್ಟುಡಿಯೋದಲ್ಲಿ ಸೆಟ್ ಹಾಕಲಾಗಿದೆ ಎಂದು ತಿಳಿದು ಬಂದಿದೆ.

ಡೆವಿಲ್ ಬಳಿಕ ದರ್ಶನ್ ತರುಣ್ ಸುಧೀರ್ ನಿರ್ದೇಶನದಲ್ಲಿ ಸಿಂಧೂರ ಲಕ್ಷ್ಮಣ ಎನ್ನುವ ಐತಿಹಾಸಿಕ ಸಿನಿಮಾ ಮಾಡಲಿದ್ದಾರೆ. ಅದಲ್ಲದೆ ಜೋಗಿ ಪ್ರೇಮ್ ನಿರ್ದೇಶನದಲ್ಲಿ ಮತ್ತೊಂದು ಸಿನಿಮಾ ಮಾಡಲಿದ್ದಾರೆ. ಈ ಎರಡೂ ಸಿನಿಮಾಗಳ ಫಸ್ಟ್ ಲುಕ್ ಅವರ ಹುಟ್ಟುಹಬ್ಬದಂದೇ ಬಿಡುಗಡೆಯಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಬಾಸ್ ಫ್ಯಾನ್ಸ್ ರಮ್ಯಾ ಕದನಕ್ಕೆ ಶಿವಣ್ಣನ ಎಂಟ್ರಿ, ಹೇಳಿದ್ದೇನು ಗೊತ್ತಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಫಸ್ಟ್ ಟೈಂ ರಿಯಾಲಿಟಿ ಶೋ ಜಡ್ಜ್ ಆಗಿ ಅಮೂಲ್ಯ: ಬೆಸ್ಟ್ ಆಯ್ಕೆ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments