Select Your Language

Notifications

webdunia
webdunia
webdunia
webdunia

ಅಪ್ಪು ನಮನ ಕಾರ್ಯಕ್ರಮದಲ್ಲಿ ಏನೇನಿರುತ್ತೆ?

ಅಪ್ಪು ನಮನ ಕಾರ್ಯಕ್ರಮದಲ್ಲಿ ಏನೇನಿರುತ್ತೆ?
ಬೆಂಗಳೂರು , ಸೋಮವಾರ, 15 ನವೆಂಬರ್ 2021 (17:40 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೌರವಾರ್ಥ ನಾಳೆ ಅರಮನೆ ಮೈದಾನದಲ್ಲಿ ಪುನೀತ್ ನಮನ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಐಪಿ ಪಾಸ್ ಮಾಡಲಾಗಿದ್ದು, ಪಾಸ್ ಇದ್ದವರಿಗೆ ಮಾತ್ರ ಪ್ರವೇಶವಿರಲಿದೆ. ಕೇವಲ ಗಣ್ಯರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದೀಗ 2000 ಜನರಿಗೆ ವ್ಯವಸ್ಥೆ ಮಾಡಲಾಗಿದೆ.

ತಮಿಳು, ತೆಲುಗು, ಮಲಯಾಳಂ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಕಲಾವಿದರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೆ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷದ ನಾಯಕರೂ ಅಲ್ಲಿರುತ್ತಾರೆ. ಲೈವ್ ಟೆಲಿಕಾಸ್ಟ್ ಗೆ ತಯಾರಿ ಮಾಡಲಾಗಿದ್ದು, ಜನರು ನೇರಪ್ರಸಾರ ವೀಕ್ಷಿಸಬಹುದಾಗಿದೆ. ಗಣ್ಯರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೈ ಭೀಮ್ ವಿವಾದ: ನಟ ಸೂರ್ಯ ವಿರುದ್ಧ ಲೀಗಲ್ ನೋಟಿಸ್