ಭಗೀರ ಸಿನಿಮಾದ ಬ್ಯುಸಿ ಮಧ್ಯೆ ಕಟೀಲು ಅಮ್ಮನ ದರ್ಶನ ಪಡೆದ ನಟ ಶ್ರೀಮುರುಳಿ

Sampriya
ಮಂಗಳವಾರ, 8 ಅಕ್ಟೋಬರ್ 2024 (16:42 IST)
Photo Courtesy X
ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ಅವರು ಕಥೆ ಬರೆದಿರುವ, ಡಾ. ಸೂರಿ ನಿರ್ದೇಶನದ ಭಗೀರ ಸಿನಿಮಾದಲ್ಲಿ ಬ್ಯುಸಿಯಾಗಿರುವ ನಟ ಶ್ರೀಮುರುಳಿ ಅವರು ಇಂದು ಕಟೀಲು  ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈಚೆಗೆ ಪುತ್ತೂರಿನಲ್ಲಿ ನಡೆದ  ಪಿಲಿಗೊಬ್ಬು ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀಮುರುಳಿ ಅವರು ನಿನ್ನೆ ಮುರುಡೇಶ್ವರಕ್ಕೆ ತೆರಳಿದ್ದರು.

ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ನಟ ಶ್ರೀಮುರಳಿ ವಿಶೇಷ ಪೂಜೆ ಸಲ್ಲಿಸಿದರು. ಆ ನಂತರ ಕ್ಷೇತ್ರದ ವತಿಯಿಂದ ಶ್ರೀಮುರಳಿಗೆ ವೆಂಕಟರಮಣ ಆಸ್ರಣ್ಣ ಅವರು ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು.

ಈ ವೇಳೆ ಮಾಧ್ಯಮದವರ ಜತೆ ಮಾತನಾಡಿದ ಶ್ರೀಮುರುಳಿ ಅವರು,  ನವರಾತ್ರಿ ಶುಭ ಸಂದರ್ಭದಲ್ಲಿ ಕರಾವಳಿಯ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದೇನೆ. ನಾನು ಬಾಲ್ಯದಲ್ಲಿ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ. ಇದೀಗ ಮತ್ತೆ ಇಲ್ಲಿಗೆ ಬರುವ ಅವಕಾಶ ಸಿಕ್ಕಿದೆ. ಸದ್ಯದಲ್ಲೇ ನಾನು ನಟಿಸಿರುವ ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿದೆ ಎಂದು ತಿಳಿಸಿದರು.

ಇದೀಗ ನಟ ಶ್ರೀಮುರುಳಿ ಅಭಿನಯದ ಬಹುನಿರೀಕ್ಷಿತ ಭಗೀರ ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಇನ್ನೂ ಹೆಚ್ಚಿನ ದೃಶ್ಯದ ಶೂಟಿಂಗ್ ಕರಾವಳಿಯಲ್ಲೇ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ಪ್ರದೋಷ್‌ಗೆ 5 ದಿನ ಜಾಮೀನು , ಯಾಕೆ ಗೊತ್ತಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

ಮುಂದಿನ ಸುದ್ದಿ
Show comments