ಪುಷ್ಪ 2 ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಶ್ರೀವಲ್ಲಿ ಲುಕ್ ಲೀಕ್

Krishnaveni K
ಬುಧವಾರ, 20 ಮಾರ್ಚ್ 2024 (16:27 IST)
Photo Courtesy: Twitter
ಹೈದರಾಬಾದ್: ಬಹುನಿರೀಕ್ಷಿತ ಪುಷ್ಪ 2 ಸಿನಿಮಾದಲ್ಲಿ ನಾಯಕಿ ರಶ್ಮಿಕಾ ಮಂದಣ್ಣ ಪಾತ್ರ ಹೇಗೆ ಕಾಣಿಸಲಿದೆ ಎಂಬ ಅಭಿಮಾನಿಗಳ ಕುತೂಹಲಕ್ಕೆ ಈಗ ಬ್ರೇಕ್ ಬಿದ್ದಿದೆ. ಪುಷ್ಪ 2 ರಲ್ಲಿ ಶ್ರೀವಲ್ಲಿ ಲುಕ್ ಈಗ ಆನ್ ಲೈನ್ ನಲ್ಲಿ ಸೋರಿಕೆಯಾಗಿದೆ.

ಅಲ್ಲು ಅರ್ಜುನ್ ನಾಯಕರಾಗಿರುವ ಪುಷ್ಪ 1 ಸಿನಿಮಾ ಭಾರೀ ಹಿಟ್ ಆಗಿತ್ತು. ಇದರ ಬೆನ್ನಲ್ಲೇ ಚಿತ್ರತಂಡ ಎರಡನೇ ಭಾಗ ನಿರ್ಮಾಣ ಮಾಡಲು ಮುಂದಾಗಿತ್ತು. ಈಗಾಗಲೇ ಬಹುತೇಕ ಶೂಟಿಂಗ್ ಕೂಡಾ ನಡೆದಿದೆ. ಇದೇ ವರ್ಷ ಆಗಸ್ಟ್ ನಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ.

ಮೊದಲ ಭಾಗದಲ್ಲಿ ರಶ್ಮಿಕಾ ಮಂದಣ್ಣ ಪುಷ್ಪನ ನಾಯಕಿ ಶ್ರೀವಲ್ಲಿಯಾಗಿ ಮಿಂಚಿದ್ದರು. ಪಕ್ಕಾ ಹಳ್ಳಿ ಹುಡುಗಿಯಂತೆ ಮಿಂಚಿದ್ದರು. ಇದೀಗ ಪುಷ್ಪ 2 ರಲ್ಲಿ ಶ್ರೀವಲ್ಲಿ ಮತ್ತು ಪುಷ್ಪ ಗಂಡ-ಹೆಂಡತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಿದ್ದರೆ ಈ ಭಾಗದಲ್ಲಿ ರಶ್ಮಿಕಾ ಲುಕ್ ಹೇಗಿರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.

ಇದೀಗ ಶೂಟಿಂಗ್ ಸೆಟ್ ನಲ್ಲಿ ರಶ್ಮಿಕಾ ಸಾಂಪ್ರದಾಯಿಕ ಸೀರೆ, ಉದ್ದ ಜಡೆಹಾಕಿಕೊಂಡು ಶ್ರೀವಲ್ಲಿಯ ಲುಕ್ ನಲ್ಲಿರುವ ಫೋಟೋಗಳು ಆನ್ ಲೈನ್ ನಲ್ಲಿ ಸೋರಿಕೆಯಾಗಿದೆ. ಸಾಂಪ್ರದಾಯಿಕ ದಿರಿಸಿನಲ್ಲಿ ರಶ್ಮಿಕಾ ಇನ್ನಷ್ಟು ಸುಂದರವಾಗಿ ಕಾಣಿಸುತ್ತಿದ್ದಾರೆ. ಶ್ರೀವಲ್ಲಿ ಲುಕ್ ಗೆ ಅಭಿಮಾನಿಗಳೂ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments