ದಾವಣಗೆರೆ: ಹುಬ್ಬಳ್ಳಿ ಹಲಭೆ ಪ್ರಕರಣವನ್ನು ವಾಪಸ್ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ನಾಯಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ಈ ಸಂಬಂಧ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು, ವಿಜಯ ದಶಮಿ ಸಂದರ್ಭದಲ್ಲಿ ರಾಜ್ಯ ಸರ್ಕಾರ ಹಿಂದೂಗಳ ಭಾವನೆಗಳನ್ನು ಕೆರಳಿಸಿದೆ. ರಾಜ್ಯ ಸರ್ಕಾರ ಮಹಿಷಮರ್ಧನ ರೀತಿ ಮರ್ಧನವಗುತ್ತದೆ ಎಂದು ಆಕ್ರೋಶ ಹೊರಹಾಕಿದರು.
ದಾವಣಗೆರೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ ಮಾತನಾಡಿದರು. ರಾಜ್ಯದಲ್ಲಿ ಭಯೋತ್ಪಾದಕರ ಸರ್ಕಾರ ಹಿಂಬಾಗಿಲ ಮೂಲಕ ಆಡಳಿತ ನಡಿಸುತ್ತಿದೆ. ದೇಶದ್ರೋಹಿಗಳ ಸರ್ಕಾರ ಆಡಳಿತ ನಡಿಸ್ತಾ ಇದೆ. ಈ ಹಿಂದೆ ಪಿಎಫ್ಐ,ಎಸ್ ಟಿಪಿಐ ಮೇಲೆ ಹಾಕಿದ ಕೇಸ್ ಹಿಂಪಡೆದಿದ್ದರು. ಆ ಕಾರಣಕ್ಕೆ ಇಂದು ಭಯೋತ್ಪಾದನೆ ಹೆಚ್ಚಾಗಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಕಳೆದ ಮೂರು ವರ್ಷಗಳ ಹಿಂದೆ ಪೊಲೀಸ್ ಠಾಣೆ ಸುಡಲು ಹೋಗಿದ್ದರು, ಕಲ್ಲು ತೋರಾಟ ಮಾಡಿ ದಾಂಧಲೆ ಸೃಷ್ಟಿಸಿದ್ದರು. ಮಾರಕಾಸ್ತ್ರಗಳನ್ನು ಬಳಕೆ ಮಾಡಿದ್ದರು, ಪೊಲೀಸ್ ಮೇಲೆ ಹಲ್ಲೆ ಸಹ ಮಾಡಿದ್ದರು. ಆ ವೇಳೆ ಸುಮಾರು 120 ಜನರ ಮೇಲೆ ಕೇಸ್ ಹಾಕಲಾಗಿತ್ತು. ಆ ಕೇಸ್ ಇವತ್ತು ಈ ಸರ್ಕಾರ ಹಿಂಪಡಿತಾ ಇದೆ, ನಾಚಿಕೆ ಆಗಲ್ವಾ ನಿಮಗೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.