Publish Date: Sat, 23 Mar 2019 (16:31 IST)
Updated Date: Sat, 23 Mar 2019 (16:33 IST)
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ವಿರುದ್ಧ ಮಂಡ್ಯ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಪರವಾಗಿ ಪ್ರಚಾರಕ್ಕಿಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಮನೆಗೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದು, ಅವರ ಕಾರು ಜಖಂಗೊಂಡಿದೆ ಎನ್ನಲಾಗಿದೆ. ಬೆಳಗಿನ ಜಾವ ಈ ಘಟನೆ ನಡೆದಿದೆ. ಇದೀಗ ಪ್ರಕರಣದ ಬಗ್ಗೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ನಡುವೆ ದರ್ಶನ್ ಮನೆ ಮೇಲೆ ಕಲ್ಲು ತೂರಾಟ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸುಮಲತಾ ಅಂಬರೀಶ್ ಅವರು ಚಾಲೆಂಜಿಂಗ್ ಸ್ಟಾರ್. ಇದನ್ನೆಲ್ಲಾ ಚಾಲೆಂಜ್ ಆಗಿಯೇ ಸ್ವೀಕರಿಸುತ್ತಾರೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ