Publish Date: Wed, 27 Dec 2023 (11:10 IST)
Updated Date: Wed, 27 Dec 2023 (11:21 IST)
ಬೆಂಗಳೂರು: ಪ್ರೇಮಲೋಕದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಸೇರಿದಂತೆ ಹಲವಾರು ಖ್ಯಾತ ನಟರಿಗೆ ಸ್ಟಂಟ್ ಕಂಪೋಸ್ ಮಾಡಿದ್ದ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ನಿಧನರಾಗಿದ್ದಾರೆ.
ಅವರಿಗೆ 58 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದಾಗಿ ಅವರು ಇಹಲೋಕ ತ್ಯಜಿಸಿದ್ದಾರೆ. ಮಲಯಾಳಂ ಮೂಲದವರಾದ ಬಾಸ್ಟಿನ್ ಕನ್ನಡದಲ್ಲಿ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿ ಕನ್ನಡಿಗರೇ ಆಗಿದ್ದರು.
ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಜೊತೆ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಪ್ರೇಮಲೋಕ, ಶಾಂತಿ ಕ್ರಾಂತಿ ಮುಂತಾದ ಸೂಪರ್ ಹಿಟ್ ಸಿನಿಮಾಗಳಿಗೆ ಸಾಹಸ ದೃಶ್ಯ ಸಂಯೋಜಿಸಿದ್ದರು. ಕನ್ನಡ ಮಾತ್ರವಲ್ಲದೆ, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಬಹುಭಾಷೆಗಳಲ್ಲಿ ಸಾವಿರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ.
ಅವರ ನಿಧನಕ್ಕೆ ದುನಿಯಾ ವಿಜಯ್, ಡಾಲಿ ಧನಂಜಯ ಸೇರಿದಂತೆ ಸ್ಯಾಂಡಲ್ ವುಡ್ ತಾರೆಯರು, ಅಭಿಮಾನಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.