Publish Date: Mon, 01 Oct 2018 (09:01 IST)
Updated Date: Mon, 01 Oct 2018 (09:02 IST)
ಬೆಂಗಳೂರು : ದಾವಣಗೆರೆಯಲ್ಲಿ ನಡೆಯುವ ಕಾರ್ಯಕ್ರಮವೊಂದಕ್ಕೆ ಹೋಗಲು ಸಾಧ್ಯವಾಗದ ಹಿನ್ನಲೆಯಲ್ಲಿ ಇದೀಗ ಕಿಚ್ಚ ಸುದೀಪ್ ಅವರು ವಿಡಿಯೋವೊಂದರ ಮೂಲಕ ದಾವಣಗೆರೆ ಅಭಿಮನಿಗಳಲ್ಲಿ ಕ್ಷಮೆ ಯಾಚಿಸಿದ್ದಾರೆ.
ಹೌದು, ಭಾನುವಾರದಂದು ನಂದ ಕಿಶೋರ್ ಒಡೆತನದ ದೊನ್ನೆ ಬಿರಿಯಾನಿ ಹೋಟೆಲ್ ದಾವಣಗೆರೆ ಯಲ್ಲಿ ಪ್ರಾರಂಭವಾಗುತ್ತಿದ್ದ ಕಾರಣ ನಂದಕಿಶೋರ್ ಅವರ ಬೆಸ್ಟ್ ಫ್ರೆಂಡ್ ಆದ ಕಿಚ್ಚ ಸುದೀಪ್ ಅವರು ಸ್ನೇಹಿತನ ಹೋಟೇಲ್ ಉದ್ಘಾಟನೆಗೆ ಹೋಗಬೇಕಿತ್ತು. ಆದರೆ ಹೋಗಲು ಸಾಧ್ಯವಾಗಿಲ್ಲ. ಆದಕಾರಣ ಈ ವಿಚಾರಕ್ಕೆ ವಿಡಿಯೋ ಮೂಲಕ ನಟ ಸುದೀಪ್ ಕ್ಷಮೆ ಕೇಳಿದ್ದಾರೆ.
ಎಲ್ಲರಿಗೂ ಕಿಚ್ಚನ ಸಮಸ್ಕಾರ, ಇಂದು ನಾನು ದಾವಣಗೆರೆಯಲ್ಲಿರುವ ಒಂದು ಹೋಟೆಲ್ ಓಪನಿಂಗ್ ಗೆ ಬರಬೇಕಿತ್ತು. ಕಾರಣಾಂತರದಿಂದ ಬರಲು ಸಾಧ್ಯವಾಗುತ್ತಿಲ್ಲ. ಕ್ಷಮೆ ಇರಲಿ, ಇದನ್ನು ಮುಂದಕ್ಕೆ ಹಾಕಿ ನಾನು ಅಕ್ಟೋಬರ್ 19 ರಂದು ನಾನು ಬರುತ್ತಿದ್ದೇನೆ. ಬಂದೇ ಬರುತ್ತೇನೆ. ಶಾಸಕ ಎಸ್ ವಿ ರಾಮಚಂದ್ರಪ್ಪ, ಹಾಗೂ ವಾಲ್ಮೀಕಿ ಶ್ರೀ ಸೇರಿದಂತೆ ನನ್ನನ್ನು ಕರೆದಿದ್ದರೋ ಅವರಿಗೆಲ್ಲ ನಾನು ಕ್ಷಮೆ ಕೇಳುತ್ತೇನೆ. ಕಾರಣಾಂತರದಿಂದ ನಾನು ಹೈದರಾಬಾದಿನಲ್ಲಿ ಉಳಿದುಕೊಂಡಿದ್ದೇನೆ. 19ಕ್ಕೆ ಖಂಡಿತ ನಾನು ಬರುತ್ತೇನೆ ನಧ ಆಲ್ ದಿ ಬೆಸ್ಟ್ ಮತ್ತೊಮ್ಮೆ ಕ್ಷಮೆ ಇರಲಿ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ