ನಟ ಸುದೀಪ್ ಹಾಗೂ ನಿರ್ಮಾಪಕ ಎಂ.ಎನ್ ಕುಮಾರ್ ನಡುವೆ ನಡೆದ ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ACMM ಕೋರ್ಟ್ನಿಂದ ಇಂದು ತೀರ್ಪು ಪ್ರಕಟವಾಗಲಿದೆ. ನಟ ಕಿಚ್ಚ ಸುದೀಪ್, ನಿರ್ಮಾಪಕ ಕುಮಾರ್ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಿದ್ರು. ಅದರನ್ವಯ ನಿನ್ನೆ ನ್ಯಾಯಾಲಯ ಸುದೀಪ್ ಹೇಳಿಕೆ ದಾಖಲಿಸಿಕೊಂಡಿತ್ತು. ಸುದೀಪ್ ಕೋರ್ಟ್ಗೆ ಹಾಜರಾಗಿ ಕುಮಾರ್ ಹಾಗೂ ಸುರೇಶ್ ವಿರುದ್ಧ ಹೇಳಿಕೆ ಕೊಟ್ಟಿದ್ದಾರೆ. ನಾನು ಸಿನಿ ಇಂಡಸ್ಟ್ರಿಯಲ್ಲಿ 22 ವರ್ಷ ಗಳಿಸಿದ್ದ ವರ್ಚಸ್ಸಿಗೆ ಧಕ್ಕೆಯಾಗಿದೆ. ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕೋರ್ಟ್ ಮುಂದೆ ಹೇಳಿಕೆ ಕೊಟ್ಟಿದ್ದಾರೆ