Webdunia - Bharat's app for daily news and videos

Install App

ಸುದೀಪ್​​ ಸಿನಿಮಾ, ಟಿವಿ ಶೋ ಪ್ರಸಾರ ತಡೆಗೆ ಮನವಿ

Webdunia
ಗುರುವಾರ, 6 ಏಪ್ರಿಲ್ 2023 (20:30 IST)
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ನಟ ಕಿಚ್ಚ ಸುದೀಪ್,​ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಮತ್ತು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆ ನಟ ಕಿಚ್ಚ ಸುದೀಪ್ ಅವರ​ ಚಲನಚಿತ್ರಗಳನ್ನು, ಟಿ.ವಿ.ಶೋಗಳನ್ನು ಮತ್ತು ಅವರು ಇರುವ ಜಾಹಿರಾತುಗಳ ಪ್ರದರ್ಶನಕ್ಕೆ ತಡೆ ಹಿಡಿಯಬೇಕೆಂದು ಶಿವಮೊಗ್ಗದ ವಕೀಲರೊಬ್ಬರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಕೀಲ ಕೆ.ಪಿ ಶ್ರೀಪಾಲ ಎಂಬುವರು ಪತ್ರದಲ್ಲಿ ಕನ್ನಡದ ಚಲನಚಿತ್ರ ನಟ ಕಿಚ್ಚ ಸುದೀಪ್​ ಅವರು ಬಿಜೆಪಿಯ ಸ್ಟಾರ್​ ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವವರೆಗೂ ಅವರ ನಟನೆಯ ಯಾವುದೇ ಚಲನಚಿತ್ರಗಳು ಚಿತ್ರಮಂದಿರಗಳಲ್ಲಿ ಮತ್ತು ಟಿವಿಗಳಲ್ಲಿ ಪ್ರದರ್ಶನವಾಗದಂತೆ, ಅವರು ನಡೆಸಿಕೊಡುವ ಟಿ.ವಿ ಶೋಗಳು ಪ್ರಸಾರವಾಗದಂತೆ ಮತ್ತು ನಟಿಸಿರುವ ಜಾಹಿರಾತುಗಳು ಸಹ ಪ್ರಸಾರವಾಗದಂತೆ ಚುನಾವಣಾ ಆಯೋಗ ಕ್ರಮ ಜರುಗಿಸಬೇಕು. ಅವರು ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿರುವುದನ್ನು ಅವರೇ ಘೋಷಣೆ ಮಾಡಿದ್ದರಿಂದ ಅವರ ನಟನೆಯ ಚಲನಚಿತ್ರಗಳು, ಟಿ.ವಿ ಶೋಗಳು ಹಾಗೂ ಜಾಹಿರಾತುಗಳು ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿರುತ್ತದೆ. ಆದ್ದರಿಂದ ತಕ್ಷಣದಿಂದ ಚುನಾವಣಾ ಆಯೋಗ ಈ ವಿಷಯಕ್ಕೆ ಸಂಬಂಧಿಸಿದಂತೆ ತುರ್ತು ಕ್ರಮ ಕೈಗೊಳ್ಳುವಂತೆ ವಕೀಲ ಕೆ.ಪಿ ಶ್ರೀಪಾಲ ಅವರು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments