Publish Date: Sat, 16 Jan 2021 (09:39 IST)
Updated Date: Sat, 16 Jan 2021 (09:40 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಸುಧಾರಾಣಿ ಪಿತೃವಿಯೋಗದ ದುಃಖದಲ್ಲಿದ್ದಾರೆ. ಅವರ ತಂದೆ ಎಚ್.ಎಸ್. ಗೋಪಾಲಕೃಷ್ಣ ನಿನ್ನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದಾಗಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಅವರ ಅಂತ್ಯಕ್ರಿಯೆ ಹರಿಶ್ಚಂದ್ರ ಘಾಟ್ ನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ಹೇಳಿವೆ.