ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Sampriya
ಮಂಗಳವಾರ, 17 ಜೂನ್ 2025 (18:44 IST)
Photo Credit X
ಬೆಂಗಳೂರು: ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ವಿರುದ್ಧ ಸಂಜು ವೆಡ್ಸ್‌ ಗೀತಾ 2 ಸಿನಿಮಾ ನಿರ್ದೇಶಕ ನಾಗಶೇಖರ್ ಅವರು ಕಲಾವಿದರ ಸಂಘ ಮತ್ತು ಫಿಲ್ಮ್ ಚೇಂಬರ್‌ಗೆ ದೂರು ನೀಡಿದ್ದಾರೆ. 

ರಚಿತಾ ರಾಮ್‌ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ. ಸಿನಿಮಾ ರಿಲೀಸ್ ಆಗುವ ಮುನ್ನ ಮತ್ತು ನಂತರ ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ಭಾಗಿಯಾಗಿಲ್ಲ. ಹಾಗಾಗಿ ನಟಿಯ ನಡೆಯ ವಿರುದ್ಧ ಚಿತ್ರತಂಡ ತಿರುಗಿ ಬಿದ್ದಿದ್ದು ನಾವು ಇಂತಹ ಕಲಾವಿದರಿಗೆ ಕಠಿಣ ಕ್ರಮ ತೆಗೆದುಕೊಳ್ಬೇಕು ಎಂದು ದೂರಿದ್ದಾರೆ. 

ಇದೀಗ ಸಿನಿಮಾಗೆ ನಟ ಸ್ವಲ್ಪನೂ ಬೆಂಬಲವನ್ನು ಸೂಚಿಸಿಲ್ಲ. ಈಗಾಗಲೇ ರಾಕ್‌ಲೈನ್ ವೆಂಕಟೇಶ್ ಅವರು ಮನವೊಲಿಸಲು ಪ್ರಯತ್ನಿಸಿದ್ದು, ಆದರೆ ಯಾವುದೇ ಪ್ರಯೋಜನವಾಗಿಲ್ಲ. ರಮ್ಯಾ, ತಮನ್ನಾಗೆ ಡೈರೆಕ್ಟ್ ಮಾಡಿದ್ದೇನೆ. ಆದರೆ ಇದುವರೆಗೆ ಇಂತಹ ಸಮಸ್ಯೆ ಎದುರಾಗಿಲ್ಲ. ಈ ರೀತಿ ಯಾವ ನಟಿಯೂ ನಡೆದುಕೊಂಡಿಲ್ಲ. 

ಶಿವಣ್ಣ, ಉಪೇಂದ್ರ, ಸುದೀಪ್ ಅಂಥವರು ಈ ಸಿನಿಮಾಗೆ ಬೆಂಬಲ ಸೂಚಿಸಿದ್ದಾರೆ. ನಾವು ಅವರಿಗೆ ಸರಿಯಾದ ಸಂಭಾವನೆಯನ್ನು ಕೊಟ್ಟಿದ್ದೇವೆ. ನಟಿಯ ನಡವಳಿಕೆಯಿಂದ ಕನ್ನಡ ಸಿನಿಮಾಗೆ ಥಿಯೇಟರ್ ಸಮಸ್ಯೆ ಕುರಿತು ತುಂಬಾ ನಷ್ಟ ಅನುಭವಿಸಿದ್ದೇವೆ ಅಂತ ಫಿಲ್ಮ್ ಚೇಂಬರ್ಗೆ ನಿರ್ದೇಶಕ ನಾಗಶೇಖರ್ ಮತ್ತು ನಟ ಶ್ರೀನಗರ ಕಿಟ್ಟಿ ದೂರು ನೀಡಿದ್ದಾರೆ. 

ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಕಾಂಬಿನೇಷನ್ ನಲ್ಲಿ ಸಂಜು ವೆಡ್ಸ್ ಗೀತಾ 2 ಸಿನಿಮಾ ಮೂಡಿ ಬಂದಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಛಲವಾದಿ ಕುಮಾರ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರಾಗಿಣಿ ದ್ವಿವೇದಿ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ನಮಗೆ ಮಕ್ಕಳು ಬೇಡವೆಂದ ನಟಿ ಸಂಗೀತಾ ಭಟ್‌, ದಿಢೀರನೇ ಆಸ್ಪತ್ರೆಗೆ ದಾಖಲು

ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಜುಗಾರಿ ಕ್ರಾಸ್ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ

ಸಿನಿಮಾ ಸಕ್ಸಸ್ ಖುಷಿ ಮಧ್ಯೆ ದಿಢೀರ್ ಎಚ್ ಡಿ ದೇವೇಗೌಡರನ್ನು ಭೇಟಿಯಾದ ರಿಷಬ್

BBK12: ರಕ್ಷಿತಾಗೆ ಈಡಿಯಟ್ ಎಂದ ಅಶ್ವಿನಿ: ನಟ್ಟು ಬೋಲ್ಟ್ ಟೈಟ್ ಮಾಡಿ ಎಂದ ನೆಟ್ಟಿಗರು: video

ಮುಂದಿನ ಸುದ್ದಿ
Show comments