Publish Date: Wed, 20 Mar 2019 (10:02 IST)
Updated Date: Wed, 20 Mar 2019 (10:03 IST)
ಬೆಂಗಳೂರು: ಮಂಡ್ಯ ಲೋಕಸಭಾ ಕಣದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ರೆಬಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮೊದಲು ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಮೆರವಣಿಗೆ ಹೊರಟು ಸಿಲ್ವರ್ ಜ್ಯುಬಿಲಿ ಪಾರ್ಕ್ ಮಂಡ್ಯದಲ್ಲಿ ಸಮಾವೇಶ ನಡೆಸಲಿದ್ದಾರೆ.
ಜನರ ಸಮ್ಮುಖದಲ್ಲೇ ನಾಮಪತ್ರ ಸಲ್ಲಿಸಲು ಸುಮಲತಾ ನಿರ್ಧರಿಸಿದ್ದಾರೆ. ಈ ಸಂದರ್ಭದಲ್ಲಿ ರಾಕಿಂಗ್ ಸ್ಟಾರ್ ಯಶ್ ಕೂಡಾ ಸುಮಲತಾಗೆ ಸಾಥ್ ನೀಡಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಮೆರವಣಿಗೆ ಆರಂಭವಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ