ನವದೆಹಲಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ವೇಳೆ ಜಡ್ಜ್ ದರ್ಶನ್ ಹಾಗೂ ಪವಿತ್ರಾ ಗೌಡಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.
ನಟ ದರ್ಶನ್ ಮತ್ತು ಇತರೆ ಏಳು ಆರೋಪಿಗಳಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಅದರಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ದರ್ಶನ್ ಪರ ಖ್ಯಾತ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸುತ್ತಿದ್ದಾರೆ.
ಈ ನಡುವೆ ಅಭಿಷೇಕ್ ಗೆ ದರ್ಶನ್ ಮತ್ತು ಪವಿತ್ರಾ ಗೌಡ ನಡುವಿನ ಸಂಬಂಧವೇನು ಎಂದು ಪ್ರಶ್ನಿಸಿದ್ದಾರೆ. ದರ್ಶನ್ ಮತ್ತು ಪವಿತ್ರಾಗೆ ಮದುವೆಯಾಗಿದೆಯೇ, ಮೆಸೇಜ್ ಕಳುಸಿದ್ದು ದರ್ಶನ್ ಪತ್ನಿಗಾ?, ಪವಿತ್ರಾ ಗೌಡ ದರ್ಶನ್ ಪತ್ನಿಯಾ ಎಂದು ಜಡ್ಜ್ ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ.
ಇನ್ನು ದರ್ಶನ್ ಪರ ವಾದ ಮಂಡಿಸುತ್ತಿರುವ ವಕೀಲ ಅಭಿಷೇಕ್ ಮನು ಸಿಂಘ್ವಿ, ದರ್ಶನ್ ಕೊಲೆ ಮಾಡಿದ್ದಾರೆ ಎನ್ನುವುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ವಿಡಿಯೋಗಳಲ್ಲಿ ಎಲ್ಲೂ ದರ್ಶನ್ ಇಲ್ಲ ಎಂದು ವಾದ ಮಂಡಿಸಿದ್ದಾರೆ.ಇದೀಗ ವಿಚಾರಣೆಯನ್ನು ಮೇ 14 ಕ್ಕೆ ಮುಂದೂಡಲಾಗಿದೆ.