Daily Horoscope

Select Your Language

Notifications

webdunia
webdunia
webdunia
webdunia

ಇದೇನಾಗಿ ಹೋಯ್ತು.. ಸುಪ್ರೀಂಕೋರ್ಟ್ ತೀರ್ಪಿನಿಂದ ನಟ ದರ್ಶನ್ ಗೆ ಸಂಕಷ್ಟ

Darshan
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಸುಪ್ರೀಂಕೋರ್ಟ್ ತೀರ್ಪಿನಿಂದ ಮತ್ತಷ್ಟು ಸಂಕಷ್ಟ ಎದುರಾಗಿದೆ. ಈ ಬಗ್ಗೆ ಇಲ್ಲಿದೆ ವಿವರ.


ಸಾಕ್ಷ್ಯಗಳ ವಿಚಾರಣೆ ವಿಳಂಬವಾಗುತ್ತಿದೆ, ಜೈಲಿನಲ್ಲಿ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ, ಕುಟುಂಬದವರ ಭೇಟಿಗೆ ಅವಕಾಶ ಸಿಗುತ್ತಿಲ್ಲ ಎಂಬಿತ್ಯಾದಿ ಕಾರಣಗಳನ್ನು ಮುಂದಿಟ್ಟುಕೊಂಡು ಜಾಮೀನು ನೀಡುವಂತೆ ದರ್ಶನ್ ಪರ ವಕೀಲರು ಸುಪ್ರೀಂಕೋರ್ಟ್ ಗೆ ಅರ್ಜಿಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಂದೆ ದರ್ಶನ್ ಪರವಾಗಿ ಖ್ಯಾತ ವಕೀಲ ಮುಕುಲ್ ರೋಹ್ಟಗಿ ಮತ್ತು ವಿರುದ್ಧವಾಗಿ ಸಿದ್ಧಾರ್ಥ್ ಲೂತ್ರಾ ವಾದ ಮಂಡಿಸಿದರು. 272 ಕ್ಕೂ ಹೆಚ್ಚು ಸಾಕ್ಷ್ಯಗಳು ಪ್ರಕರಣದಲ್ಲಿದೆ. ಆದರೆ ಇದುವರೆಗೆ ಕೇವಲ 10 ಸಾಕ್ಷ್ಯಗಳ ವಿಚಾರಣೆ ನಡೆದಿದೆಯಷ್ಟೇ ಎಂದು ಮುಕುಲ್ ರೋಹ್ಟಗಿ ಹೇಳಿದ್ದಾರೆ.

ಇದಕ್ಕೆ ಪ್ರತಿಯಾಗಿ ಸಿದ್ಧಾರ್ಥ್ ಲೂತ್ರಾ ಆರೋಪಿಗಳು ಸಾಕ್ಷಿಗಳಿಗೆ ಏನೇನು ಮಾಡಿದ್ದೀರೆಂದು ಹೇಳಿದರೆ ಜಾಮೀನು ಅರ್ಜಿಯೇ ರದ್ದಾಗಲಿದೆ ಎಂದಿದ್ದಾರೆ. ಅಲ್ಲದೆ, ನಮಗೆ ಸಾಕ್ಷ್ಯಗಳ ವಿಚಾರಣೆಗೆ ಒಂದು ವರ್ಷದ ಕಾಲಾವಧಿ ಬೇಕು ಎಂದು ಕೇಳಿಕೊಂಡಿದ್ದಾರೆ. ಇದಕ್ಕೆ ಸ್ಪಂದಿಸಿರುವ ಸುಪ್ರೀಂಕೋರ್ಟ್ ಸಾಕ್ಷ್ಯಗಳ ವಿಚಾರಣೆಗೆ ಒಂದು ವರ್ಷದ ಕಾಲಾವಧಿ ನೀಡಿದೆ. ಇದಾದ ಬಳಿಕ ಬೇಕಾದರೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದಿದೆ. ಹೀಗಾಗಿ ಇನ್ನು ಒಂದು ವರ್ಷಗಳಿಗೆ ದರ್ಶನ್ ಗೆ ಜೈಲು ಶಿಕ್ಷೆ ಖಾಯಂ ಆಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಿಟ್ಲರ್ ಸೀರಿಯಲ್‌ನಲ್ಲಿ ದಿಲೀಪ್ ರಾಜ್‌ಗೆ ನಾಯಕಿಯಾಗಿದ್ದ ಮಲೈಕಾ ಭಾವುಕಾ ಪೋಸ್ಟ್‌