ಹೈದರಾಬಾದ್: ಮೆಗಾಸ್ಟಾರ್ ಚಿರಂಜೀವಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಸೈರಾ ನರಸಿಂಹ ರೆಡ್ಡಿ ಸಿನಿಮಾ ಇಂದು ತೆಲುಗು, ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.
									
										
								
																	
ಸ್ವಾತಂತ್ರ್ಯ ಪೂರ್ವ ಘಟನೆಯಾಧಾರಿತ ಐತಿಹಾಸಿಕ ಕತೆಯುಳ್ಳ ಅದ್ಧೂರಿ ನಿರ್ಮಾಣದ ಸಿನಿಮಾ ಇದಾಗಿದ್ದು, ಚಿತ್ರದ ಬಗ್ಗೆ ಭಾರೀ ನಿರೀಕ್ಷೆಯಿದೆ. ಚಿರಂಜೀವಿ ಜತೆಗೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್, ಕನ್ನಡದ ಕಿಚ್ಚ ಸುದೀಪ್ ಮುಂತಾದ ಘಟಾನುಘಟಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.
									
			
			 
 			
 
 			
			                     
							
							
			        							
								
																	ಈಗಾಗಲೇ ಪ್ರಿ ಬುಕಿಂಗ್ ನಲ್ಲಿ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ. ತೆಲುಗಿನಲ್ಲಿ ಹೆಚ್ಚಿನ ಬೇಡಿಕೆಯಿದ್ದು, ಹಿಂದಿ ಮತ್ತು ಇತರ ಭಾಷೆಗಳಲ್ಲೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರ ವೀಕ್ಷಿಸುವ ನಿರೀಕ್ಷೆಯಲ್ಲಿ ಚಿತ್ರತಂಡವಿದೆ.