Publish Date: Wed, 03 May 2023 (19:00 IST)
Updated Date: Wed, 03 May 2023 (19:13 IST)
ಚೆನ್ನೈ: ತಮಿಳಿನ ಖ್ಯಾತ ಹಾಸ್ಯ ನಟ, ನಿರ್ದೇಶಕ ಮನೋಬಾಲ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.
ತಮಿಳು ಚಿತ್ರರಂಗದಲ್ಲಿ ತಮ್ಮದೇ ಮ್ಯಾನರಿಸಂ ಮೂಲಕ ಗುರುತಿಸಿಕೊಂಡಿದ್ದ ಮನೋಬಾಲ ಸುಮಾರು 900 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಇದೀಗ ಲಿವರ್ ಸಂಬಂಧಿತ ಸಮಸ್ಯೆಯಿಂದಾಗಿ ಅವರು ಸಾವನ್ನಪ್ಪಿದ್ದಾರೆ.
ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಸೂಪರ್ ಸ್ಟಾರ್ ರಜನೀಕಾಂತ್, ಕಮಲ್ ಹಾಸನ್ ಸೇರಿದಂತೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.