Select Your Language

Notifications

webdunia
webdunia
webdunia
webdunia

ತೆಲುಗು ನಟ ರಾಜಶೇಖರ್ ಗೆ ಕೊರೊನಾ; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ತೆಲುಗು ನಟ ರಾಜಶೇಖರ್ ಗೆ ಕೊರೊನಾ; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ
ಹೈದರಾಬಾದ್ , ಶುಕ್ರವಾರ, 23 ಅಕ್ಟೋಬರ್ 2020 (10:14 IST)
ಹೈದರಾಬಾದ್ : ತೆಲುಗು ನಟ ರಾಜಶೇಖರ್ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ನಟ ರಾಜಶೇಖರ್ ಅವರ ಕುಟುಂಬದವರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಆ ವೇಳೆ ನಟ ರಾಜಶೇಕರ್ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೊರೊನಾ ವೈರಸ್ ವಿರುದ್ಧ ಅವರ  ಹೋರಾಟ ಗಂಭೀರವಾಗಿದೆ ಎನ್ನಲಾಗಿದೆ.

 ಈ ಹಿನ್ನಲೆಯಲ್ಲಿ ಅವರ ಪುತ್ರಿ ಶಿವತ್ಮಿಕಾ  ತಮ್ಮ ತಂದೆ ಬೇಗ ಚೇತರಿಸಿಕೊಳ್ಳಲಿ ಎಂದು ಎಲ್ಲರೂ ಪ್ರಾರ್ಥಿಸುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ನಟ ರಾಜಶೇಖರ್ ಅವರನ್ನು ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಜಯ್ ಸೇತುಪತಿ ಮಗಳ ಮೇಲೆ ಅತ್ಯಾಚಾರದ ಬೆದರಿಕೆ ಹಾಕಿದ ವ್ಯಕ್ತಿ ಯಾರು ಗೊತ್ತಾ?