ಹೈದರಾಬಾದ್: ತೆಲುಗು ಖ್ಯಾತ ನಟ ವಿಷ್ಣು ಮಂಚುಗೆ ಶೂಟಿಂಗ್ ವೇಳೆ ಅವಘಡವಾಗಿದ್ದು ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.
ವಿಷ್ಣು ಮಂಚು ಪೌರಾಣಿಕ ಕಣ್ಣಪ್ಪ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ನ್ಯೂಜಿಲೆಂಡ್ ದೇಶದಲ್ಲಿ ನಡೆಯುತ್ತಿದೆ. ಶೂಟಿಂಗ್ ವೇಳೆ ಡ್ರೋಣ್ ಹೊಡೆದು ವಿಷ್ಣು ಗಾಯಗೊಂಡಿದ್ದಾರೆ ಎನ್ನಲಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಣ್ಣಪ್ಪ ಸಿನಿಮಾದಲ್ಲಿ ಕನ್ನಡ ನಟ ಶಿವರಾಜ್ ಕುಮಾರ್ ಸೇರಿದಂತೆ ಬಹುಭಾಷಾ ನಟರು ಭಾಗಿಯಾಗಲಿದ್ದಾರೆ. ಈ ಸಿನಿಮಾ ತಮ್ಮ ಕನಸಿನ ಪ್ರಾಜೆಕ್ಟ್ ಎಂದು ವಿಷ್ಣು ಮಂಚು ಹೇಳಿಕೊಂಡಿದ್ದರು.