Select Your Language

Notifications

webdunia
webdunia
webdunia
webdunia

ತೆಲುಗು ನಟಿ ಹೇಮಾ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರ್ಪಡೆ

ತೆಲುಗು ನಟಿ ಹೇಮಾ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರ್ಪಡೆ
ಹೈದರಾಬಾದ್ , ಮಂಗಳವಾರ, 13 ಏಪ್ರಿಲ್ 2021 (13:41 IST)
ಹೈದರಾಬಾದ್ : 250ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸುತ್ತಿದ್ದ ತೆಲುಗು ನಟಿ ಹೇಮಾ ಅವರು ಈಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ನಟಿ ಹೇಮಾ ಅವರು ಕಳೆದ ಚುನಾವಣೆಗೂ ಮುನ್ನ ವೈಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದರು. ಇದೀಗ ಅವರು ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿಗೆ ಸೇರಿಕೊಂಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಹಾಗೇ ತಿರುಪತಿಯ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ರತ್ನಪ್ರಭಾ ಅವರ ಪರವಾಗಿ ಪ್ರಚಾರ ನಡೆಸಿದ ಅವರು ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಳ್ಳಲು ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ರೀಡಾಪಟು ಪಾತ್ರದಲ್ಲಿ ಜೂನಿಯರ್ ಎನ್ ಟಿಆರ್