ಹೈದರಾಬಾದ್ : ಅನಾರೋಗ್ಯದ ಹಿನ್ನಲೆಯಲ್ಲಿ ತೆಲುಗಿನ ಹಾಸ್ಯನಟ ಪೃಥ್ವಿರಾಜ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪೃಥ್ವಿರಾಜ್ ಅವರು ಕೆಲವು ದಿನಗಳಿಂದ ಅನಾರೋಗ್ಯಸಮಸ್ಯೆಯಿಂದ ಬಳಲುತ್ತಿದ್ದರು. ಅಲ್ಲದೇ ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಅವರು ಆಸ್ಪತ್ರೆಯಿಂದಲೇ ವಿಡಿಯೋ ಮಾಡಿ ಮಾಹಿತಿ ತಿಳಿಸಿ ಜನರ ಹಾರೈಕೆಯನ್ನು ಬಯಸಿದ್ದಾರೆ.
ಅಲ್ಲದೇ ಪೃಥ್ವಿರಾಜ್ ಅವರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ ಎನ್ನಲಾಗಿದೆ. ಆದರೂ ಸಹ ಅವರು ಆಸ್ಪತ್ರೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!