Webdunia - Bharat's app for daily news and videos

Install App

ಮದುವೆ ಬಳಿಕ ತರುಣ್ ಸುಧೀರ್, ಸೋನಲ್ ಮೊದಲ ಸೋಷಿಯಲ್ ಮೀಡಿಯಾ ಪೋಸ್ಟ್

Krishnaveni K
ಶುಕ್ರವಾರ, 16 ಆಗಸ್ಟ್ 2024 (14:02 IST)
ಬೆಂಗಳೂರು: ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮಾಂತೆರೋ ಈಗ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಕಳೆದ ಭಾನುವಾರ ಈ ಜೋಡಿ ವಿವಾಹವಾಗಿದ್ದರು. ಮದುವೆ ಬಳಿಕ ಸೈಲೆಂಟಾಗಿದ್ದ ಜೋಡಿ ಇಂದು ವರಮಹಾಲಕ್ಷ್ಮಿ ಹಬ್ಬದಂದು ತಮ್ಮ ಮದುವೆಗೆ ಹರಸಿದವರಿಗೆ ಧನ್ಯವಾದ ಸಲ್ಲಿಸುವ ಮೂಲಕ ಮೊದಲ ಪೋಸ್ಟ್ ಮಾಡಿದ್ದಾರೆ. ಜೊತೆಗೆ ಮದುವೆಯ ಸುಂದರ ಕ್ಷಣಗಳನ್ನೂ ಹಂಚಿಕೊಂಡಿದ್ದಾರೆ.

ಸೋನಲ್ ಮತ್ತು ತರುಣ್ ಮದುವೆ ಅದ್ಧೂರಿಯಾಗಿ ಹಿಂದೂ ಸಂಪ್ರದಾಯದಂತೆ ನೆರವೇರಿತ್ತು. ಸ್ಯಾಂಡಲ್  ವುಡ್ ನ ಸ್ನೇಹಿತರೆಲ್ಲಾ ಮದುವೆಗೆ ಬಂದು ಶುಭ ಹಾರೈಸಿದ್ದರು. ಮದುವೆ ಬಳಿಕ ಮೊದಲ ಪೋಸ್ಟ್ ಮಾಡಿರುವ ತರುಣ್-ಸೋನಲ್, ನಮ್ಮ ಬ್ಲಾಕ್ ಬ್ಲಸ್ಟರ್ ಜೀವನ ಶುರುವಾಗಿದೆ. ಹರಸಿದ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.

‘ನಿಮ್ಮೆಲ್ಲರ ಪ್ರೀತಿ, ಹಾರೈಕೆ ನಮ್ಮ ಮದುವೆ ಸಮಾರಂಭವನ್ನು ಇನ್ನಷ್ಟು ಸುಂದರವಾಗಿಸಿದೆ. ನಮ್ಮ ಜೀವನದ  ಈ ಸುಂದರ ದಿನದ ಕೆಲವೊಂದು ಕ್ಷಣಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಖುಷಿಯಾಗುತ್ತಿದೆ. ನಮ್ಮ ಮದುವೆಯ ಸಂಭ್ರಮದಲ್ಲಿ ಭಾಗಿಯಾಗಿ ಹರಸಿದ ಪ್ರತಿಯೊಬ್ಬ ಪ್ರೀತಿ ಪಾತ್ರರಿಗೂ ನಮ್ಮ ಧನ್ಯವಾದಗಳು. ನಿಮ್ಮಿಂದ ನಮಗಾದ ಸಂತೋಷಕ್ಕೆ ಮೇರೆ ಇಲ್ಲ’ ಎಂದು ತರುಣ್, ಸೋನಲ್ ಸಂದೇಶ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಭಾನುವಾರದ ದಾಖಲೆ ಏನಾಗಿದೆ ನೋಡಿ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ಮುಂದಿನ ಸುದ್ದಿ
Show comments