Webdunia - Bharat's app for daily news and videos

Install App

ಆ ನಟನಿಗೆ ಇನ್‌ಸ್ಟಾಗ್ರಾಂನಲ್ಲಿ 56 ಲಕ್ಷ ಫಾಲೋವರ್ಸ್: ಚುನಾವಣೆಯಲ್ಲಿ ಪಡೆದಿದ್ದ ಕೇವಲ 137 ಮತ!

Sampriya
ಶನಿವಾರ, 23 ನವೆಂಬರ್ 2024 (17:36 IST)
Photo Courtesy X
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ವರಸೋವಾ ಕ್ಷೇತ್ರದಿಂದ ನಟ ಆಜಾಜ್ ಖಾನ್ ಅವರು ಆಜಾದ್ ಸಮಾಜ್ ಪಾರ್ಟಿಯಿಂದ ಸ್ಪರ್ಧಿಸಿದ್ದರು. ಸಾಕಷ್ಟು ಪ್ರಚಾರ ಮಾಡಿದ್ದರು. ಆದರೆ, ಅವರು ಗಳಿಸಿದ್ದು ಕೇವಲ 137 ಮತ ಮಾತ್ರ.

ವಿಚಿತ್ರವೆಂದರೆ  ನಟ ಆಜಾಜ್‌ಗೆ ಇನ್‌ಸ್ಟಾಗ್ರಾಂನಲ್ಲಿ 56 ಲಕ್ಷ ಫಾಲೋವರ್‌ಗಳಿದ್ದಾರೆ. ಅವರ ಜನಪ್ರಿಯತೆಯು ಚುನಾವಣಾ ಅಖಾಢದಲ್ಲಿ ಇವು ಲೆಕ್ಕಕ್ಕೆ ಬರಲೇ ಇಲ್ಲ.

ಫೇಸ್‌ಬುಕ್, ಎಕ್ಸ್‌ ಹಾಗೂ ಇತರ ಸಾಮಾಜಿಕ ಜಾಲತಾಣಗಲ್ಲಿಯೂ ಅವರು ಲಕ್ಷಾಂತರ ಫಾಲೋವರ್‌ಗಳನ್ನು ಹೊಂದಿದ್ದಾರೆ. ಅವರ ಜನಪ್ರಿಯತೆ ಚುನಾವಣೆಯಲ್ಲಿ ಲೆಕ್ಕಕ್ಕೆ ಬಂದಿಲ್ಲ. ಇದರಿಂದ ಆ ನಟ ಸಾಕಷ್ಟು ಮುಜುಗರಕ್ಕೆ ಒಳಗಾಗಿದ್ದಾರೆ.

ಕಾಂಗ್ರೆಸ್ ಭದ್ರಕೋಟೆಯಾಗಿರುವ ಪ್ರಸ್ತುತ ವರಸೋವಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹರೂನ್ ಖಾನ್ ಅವರು 58 ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ. ಆಜಾಜ್ ಅವರಿಗಿಂತಲೂ ಹತ್ತು ಪಟ್ಟು ಅಧಿಕ ಅಂದರೆ 1,222 ಮತಗಳು ನೋಟಾಕ್ಕೆ ಚಲಾವಣೆ ಆಗಿವೆ.

ಆಜಾಜ್ ಖಾನ್ ಅವರು ಹಿಂದಿ ಬಿಗ್ ಬಾಸ್ ಮಾಜಿ ಸ್ಪರ್ಧಿಯೂ ಹೌದು. ಅನೇಕ ಚಿತ್ರಗಳಲ್ಲಿ, ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ತಾನೊಬ್ಬ ರಾಜಕಾರಣಿಯೂ ಹೌದು ಎಂದು ಅವರು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments