Webdunia - Bharat's app for daily news and videos

Install App

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Sampriya
ಶನಿವಾರ, 7 ಜೂನ್ 2025 (16:29 IST)
ಬೆಂಗಳೂರು: ಸಹಕಲಾವಿದೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಜೈಲು ಸೇರಿದ್ದ ನಟ, ಕಾಮಿಡಿ ಕಿಲಾಡಿಗಳು ಖ್ಯಾತಿಯ  ಮಡೆನೂರು ಮನು ಇಂದು ಜಾಮೀನು ಮೂಲಕ ಹೊರಬಂದಿದ್ದಾರೆ. 

ಬಿಡುಗಡೆ ಬಳಿಕ ಮಾಧ್ಯಮದವರ ಮುಂದೆ ಮಾತನಾಡಿದ ಅವರು ಶಿವಣ್ಣ, ದರ್ಶನ್ ಹಾಗೂ ಧ್ರುವ ಸರ್ಜಾ ಬಗ್ಗೆ ಮಾತನಾಡಿರುವ ಆಡಿಯೋ ನನ್ನದಲ್ಲ. ನಾನು ಮೊದಲು ಶಿವಣ್ಣ ಅವರನ್ನು ಭೇಟಿ ಮಾಡಿ ಅವರಿಗೆ ನಡೆದ ಎಲ್ಲಾ ಘಟನೆಯನ್ನು ತಿಳಿಸುತ್ತೇನೆ. ಕಳೆದ ಮೂರು ವರ್ಷಗಳ ಶ್ರಮವನ್ನು ಹಾಳು ಮಾಡಿದ್ದಾರೆ. ಐದಾರು ಮಂದಿ ಸೇರಿಕೊಂಡು ನನ್ನ ಮೇಲೆ ಪ್ಲಾನ್ ಮಾಡಿ ಈ ರೀತಿ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಬಿಡುಗಡೆಗೂ ಮುನ್ನಾವೇ ಸಾಕಷ್ಟು ತೊಂದರೆಗಳನ್ನು ಅನುಭವಿಸಿದೆವೂ.  ಪ್ರತಿ ಹಮತದಲ್ಲೂ ತನ್ನ ವಿರುದ್ಧ ಷಡಂತ್ಯ ನಡೆದಿದೆ. ಸಿನಿಮಾ ರಿಲೀಸ್‌ಗೂ ಮೊದಲೇ ಕುಣಿಗಲ್ ಬಳಿ ಮೊಟ್ಟೆ ಹೊಡೆದಿದ್ದಾರೆ. ನನ್ನ ಮೇಲೆ ಹಲ್ಲೆ ನಡೆಸಿ ಬಟ್ಟೆಗಳನ್ನು ಹರಿದಿದ್ದಾರೆ. ಅವರೇ ನನ್ನ ಮೇಲೆ  ಪ್ರಕರಣವನ್ನು ದಾಖಲಿಸಿದ್ದಾರೆ ಎಂದರು.

ಅತ್ಯಾಚಾರ ಕೇಸ್‌ನಲ್ಲಿ ಕಾನೂನು ಹೋರಾಟ ಮಾಡುತ್ತೇನೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ ಎಂದು ಮನು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments