Webdunia - Bharat's app for daily news and videos

Install App

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

Sampriya
ಸೋಮವಾರ, 16 ಜೂನ್ 2025 (16:29 IST)
Photo Credit X
ಬೆಂಗಳೂರು: ಸಿನಿಮಾ ತಂಡದ ಮೇಲೆ ಸಾಲು ಮರ ತಿಮ್ಮಕ್ಕ ದೂರು ನೀಡಿದ ಘಟನೆ ವರದಿಯಾಗಿದೆ. ಪರಿಸರ ರಕ್ಷಣೆಯಲ್ಲಿ ಅವರ ಕೊಡುಗೆಯನ್ನು ಸಾಲು ಮರದ ತಿಮ್ಮಕ್ಕರ ಸಾಧನೆಯನ್ನು ಸಿನಿಮಾ ಮಾಡಲು ಹೊರಟ ಚಿತ್ರತಂಡದ ವಿರುದ್ಧ ಅವರು ದೂರನ್ನು ನೀಡಿದ್ದಾರೆ. ಈ ಸಿನಿಂಆಗೆ ‘ವೃಕ್ಷ ಮಾತೆ’ ಎಂಬ ಶೀರ್ಷಿಕೆ ಇಡಲಾಗಿದೆ. ಆದರೆ, ಈ ಸಿನಿಮಾ ಮಾಡಬಾರದು ಎಂದು ಸ್ವತಃ ತಿಮ್ಮಕ್ಕ ಅವರೇ ಫಿಲ್ಮ್ ಚೇಂಬರ್​ಗೆ ಬಂದು ದೂರು ಕೊಟ್ಟಿದ್ದಾರೆ.

‘ಶ್ರೀಲಕ್ಷ್ಮಿ ವೆಂಕಟೇಶ್ವರ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ‘ವೃಕ್ಷಮಾತೆ’ ಸಿನಿಮಾ ಸಿದ್ಧವಾಗುತ್ತಿದೆ. ಈ ಚಿತ್ರವನ್ನು ದಿಲೀಪ್ ಕುಮಾರ್ ಎಚ್.ಆರ್., ಸೌಜನ್ಯ ಡಿ.ವಿ, ಎ. ಸಂತೋಷ್ ಮುರಳಿ, ಒರಟ ಶ್ರೀ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ.

ಒರಟ ಶ್ರೀ ನಿರ್ದೇಶನ ಮಾಡುತ್ತಿದ್ದಾರೆ. ಸಿದ್ದೇಶ್ ಅವರು ಬರೆದಿರುವ ‘ವೃಕ್ಷಮಾತೆ ಸಾಲುಮರದ ತಿಮ್ಮಕ್ಕ’ ಕೃತಿಯನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗುತ್ತಿದೆ. ಆದರೆ, ಇದಕ್ಕೆ ಸಾಲು ಮರದ ತಿಮ್ಮಕ್ಕ ಅವರೇ ವಿರೋಧ ಹೊರಹಾಕಿದ್ದಾರೆ.

ಎರದು ದಿನಗಳ ಹಿಂದೆ ಚಿತ್ರತಂಡ ಶೂಟಿಂಗ್ ಮಾಡುತ್ತಿತ್ತು. ಈ ವೇಳೆ ತಂಡವನ್ನು ಸ್ಟೇಷನ್​ಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ‘ವೃಕ್ಷಮಾತೆ’ ಸಿನಿಮಾಗೆ ಸಾಲು ಮರದ ತಿಮ್ಮಕ್ಕ ಅವರ ಸಾಕು ಮಗ ಉಮೇಶ್ ಅವರಿಂದ ಅನುಮತಿ ಪಡೆದಿಲ್ಲ ಎಂಬ ಮಾಹಿತಿಯನ್ನು ಪೊಲೀಸರು ನೀಡಿದ್ದರು. ಈಗ ಫಿಲ್ಮ್​ ಚೇಂಬರ್​ಗೆ ಆಗಮಿಸಿ ಸಾಲು ಮರದ ತಿಮ್ಮಕ್ಕ ದೂರು ಕೊಟ್ಟಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅವಹೇಳನಕಾರಿ ಹೇಳಿಕೆ: ನಾಳೆ ನಟಿ, ಸಂಸದೆ ಕಂಗನಾಗೆ ಮಹತ್ವದ ದಿನ

Exclusive: ಸಾಹಸಸಿಂಹ ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ: ಅನಿರುದ್ಧ ಜತಕರ ಫಸ್ಟ್ ರಿಯಾಕ್ಷನ್

ಕೊನೆಗೂ ವಿಷ್ಣು ಅಭಿಮಾನಿಗಳ ಬಹುದಿನಗಳ ಬೇಡಿಕೆಗೆ ಅಸ್ತು ಎಂದ ಸರ್ಕಾರ

ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಆರೋಗ್ಯದಲ್ಲಿ ಏರುಪೇರು

ಶಿಸ್ತಿನ ಸಿಪಾಯಿ ನಿರ್ದೇಶಕ ಎಸ್ ನಾರಾಯಣ್ ಸೊಸೆಗೆ ಹೀಗೆಲ್ಲಾ ಮಾಡಿದ್ರಾ: ಕೇಸ್ ದಾಖಲು

ಮುಂದಿನ ಸುದ್ದಿ
Show comments