Select Your Language

Notifications

webdunia
webdunia
webdunia
webdunia

ಯಶ್ ಕುಟುಂಬದವರು 3 ತಿಂಗಳೊಳಗೆ ಮನೆ ಖಾಲಿ ಮಾಡುವಂತೆ ಕೋರ್ಟ್ ಆದೇಶ

ಯಶ್ ಕುಟುಂಬದವರು 3 ತಿಂಗಳೊಳಗೆ ಮನೆ ಖಾಲಿ ಮಾಡುವಂತೆ ಕೋರ್ಟ್ ಆದೇಶ
ಬೆಂಗಳೂರು , ಬುಧವಾರ, 18 ಏಪ್ರಿಲ್ 2018 (12:12 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ 3 ತಿಂಗಳೊಳಗೆ ಮನೆ ಖಾಲಿ ಮಾಡುವಂತೆ ಬೆಂಗಳೂರಿನ 42 ನೇ ಸಿಟಿ ಸಿವಿಲ್ ಕೋರ್ಟ್ ಆದೇಶಿಸಿದೆ.


ಯಶ್ ಅವರ ಕುಟುಂಬದವರು ಬೇರೆ ಮನೆಯಲ್ಲಿ ವಾಸವಾಗಿದ್ದರೂ, ಕೂಡ  ಬೀಗವನ್ನು ಹಾಕಿ ಬಾಡಿಗೆ ಮನೆಯನ್ನು ತಮ್ಮ ಸುಪರ್ದಿಯಲ್ಲಿಯೇ ಇಟ್ಟುಕೊಂಡಿದ್ದಲ್ಲದೇ ಬಾಡಿಯನ್ನು ಕೂಡ ನೀಡಿಲ್ಲ. ಆದಕಾರಣ  ಅವರು ಮನೆ ಖಾಲಿ ಮಾಡಿಸಲು ಮನೆ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು.


ಇದೀಗ  ಬೆಂಗಳೂರಿನ 42 ನೇ ಸಿಟಿ ಸಿವಿಲ್ ಕೋರ್ಟ್ ಯಶ್ ಅವರ ತಾಯಿ ಪುಷ್ಪಾ ಅವರಿಗೆ ಬಾಕಿ ಉಳಿಸಿಕೊಂಡಿರುವ ಬಾಡಿಗೆ ಹಣ 9.60 ಲಕ್ಷ ರೂ. ನೀಡಿ 3 ತಿಂಗಳೊಳಗೆ ಮನೆ ಖಾಲಿ ಮಾಡವಂತೆ ಸೂಚನೆ ನೀಡಿದೆ. ಅಲ್ಲದೇ, ಮನೆ ಅಡ್ವಾನ್ಸ್ 4 ಲಕ್ಷ ರೂ. ವಾಪಸ್ ಕೊಡುವಂತೆ ಮನೆ ಮಾಲೀಕ ಮುನಿಪ್ರಸಾದ್ ಅವರಿಗೆ ಸೂಚಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಟ್ವೀಟರ್ ನಲ್ಲಿ ಟ್ಯಾಗ್ ಮಾಡಿದ ಫೋಟೋ ನೋಡಿ ಕಣ್ಣೀರು ಬರುತ್ತದೆ ಎಂದು ನಟ ಜಗ್ಗೇಶ್ ಹೇಳಿದ್ಯಾಕೆ…?